Road mishap: ಟ್ರಕ್ – ಕಾರು ಭೀಕರ ಅಪಘಾತ; ಒಂದೇ ಕುಟುಂಬದ 6 ಮಂದಿ ದುರ್ಮರಣ
Team Udayavani, Mar 10, 2024, 1:20 PM IST
ಲಕ್ನೋ: ಕಾರಿಗೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಜೌನ್ಪುರದ ಗೌರಬಾದ್ಶಹಪುರ ಪ್ರದೇಶದ ಪ್ರಸಾದ್ ಎಂಜಿನಿಯರಿಂಗ್ ಕಾಲೇಜು ಬಳಿ ಭಾನುವಾರ ಮಧ್ಯರಾತ್ರಿ 2.30ರ ಸಮಯದಲ್ಲಿ ಈ ಘಟನೆ ನಡೆದಿದೆ.
ಕಾರಿನಲ್ಲಿ ಬಿಹಾರದ ಸೀತಾಮರ್ಹಿ ಮೂಲದ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದರು. ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸು ಆಗುವ ವೇಳೆ ಟ್ರಕ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಘಟನೆಯಲ್ಲಿ ಗಜಧರ್ ಶರ್ಮಾ (60) ಮತ್ತು ಅವರ ಮಗ ಅನೀಶ್ ಶರ್ಮಾ (35), ಜವಾಹರ್ ಶರ್ಮಾ (57) ಮತ್ತು ಅವರ 17 ವರ್ಷದ ಮಗ ಸೋನಮ್ (34) ಮತ್ತು ರಿಂಕು (32) ಮೃತಪಟ್ಟಿದ್ದಾರೆ. ಮಗು ಸೇರಿದಂತೆ ಉಳಿದ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಚಾಲಕನನ್ನು ಬಂಧಿಸಲು ಪೊಲೀಸರು ಟ್ರಕ್ ನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ನಿದ್ರೆಗೆ ಜಾರಿದ ಕಾರಣ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ