ಭೀಕರ ರಸ್ತೆ ಅಪಘಾತ: ಕಾರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವು
Team Udayavani, Aug 14, 2022, 3:33 PM IST
ಮುಂಬೈ : ಕಾರು ಮತ್ತು ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂಭವಿಸಿದೆ.
ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಇಂದು ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ.
ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನುಜ್ಜು ಗುಜ್ಜಾಗಿದ್ದು ಕ್ರೇನ್ ಮೂಲಕ ಬೇರ್ಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ.
ಇದನ್ನೂ ಓದಿ : ನಾವು ಪ್ರವಾಸ ಆರಂಭಿಸಿದರೆ ಕಾಂಗ್ರೆಸ್ ಗೆ ಬಿಜೆಪಿ ಶಕ್ತಿ ಅರಿವಾಗಲಿದೆ: ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ