ಅಮರನಾಥ ಯಾತ್ರಿಗಳ ಮೇಲೆ ಉಗ್ರರ ಅಟ್ಟ ಹಾಸ: ಏಳು ಮಂದಿ ಬಲಿ

Team Udayavani, Jul 11, 2017, 8:03 AM IST

11-PTI-2.jpg

ಶ್ರೀನಗರ/ನವದೆಹಲಿ: ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ಯಾತ್ರಿಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ಐವರು ಮಹಿಳೆ ಯರೂ ಸೇರಿದಂತೆ ಏಳು ಮಂದಿ ಅಸುನೀಗಿದ್ದಾರೆ. ಈ ಘಟನೆಯಲ್ಲಿ 32 ಮಂದಿ  ಗಾಯಗೊಂಡಿದ್ದಾರೆ.

ಅನಂತ್‌ನಾಗ್‌ ಜಿಲ್ಲೆಯ ಪೆಹೆಲ್ಗಾಂವ್‌ನಿಂದ 50 ಕಿಮೀ ದೂರದ ಸ್ಥಳದಲ್ಲಿ ಸೋಮವಾರ ರಾತ್ರಿ 8.20ಕ್ಕೆ ಈ ದುರಂತ ನಡೆದಿದೆ. ದುರಂತದಲ್ಲಿ ಸಾವಿಗೀಡಾದವರೆಲ್ಲ ಗುಜರಾತ್‌ನ ವಲ್ಸಾಡ್‌ಗೆ ಸೇರಿದವರು. ಈ ಸಾಲಿನ ಅಮರನಾಥ ಯಾತ್ರೆ ಮೇಲೆ ಇದು ಮೊದಲ ಉಗ್ರ ದಾಳಿಯಾಗಿದೆ. 2000ನೇ ಇಸ್ವಿಯಲ್ಲಿ ಯಾತ್ರೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ 30 ಮಂದಿ ಅಸುನೀಗಿದ್ದರು. ಅದಾದ ಬಳಿಕ ನಡೆದ ಅತ್ಯಂತ ಹೇಯ ಕೃತ್ಯ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಅರುಣ್‌ ಜೇಟ್ಲಿ, ಗೃಹ ಸಚಿವ ರಾಜನಾಥ್‌ ಸಿಂಗ್‌, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹ ಬೂಬಾ ಮುಪ್ತಿ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖರು ಈ ಘಟನೆ  ಯನ್ನು ಅತ್ಯುಗ್ರ ಶಬ್ದಗಳಿಂದ ಖಂಡಿಸಿದ್ದಾರೆ.

ಬೆಂಗಾವಲು ಪಡೆ ಮೇಲೆ ದಾಳಿ: ಸೋಮವಾರ ರಾತ್ರಿ 8.20ರ ವೇಳೆ 17 ಮಂದಿ ಇದ್ದ ಬಸ್ಸು ಸೋನಾಮಾರ್ಗ್‌ನಿಂದ ಯಾತ್ರೆ ಮುಕ್ತಾಯಗೊಳಿಸಿ ಬರುತ್ತಿತ್ತು. ರಾತ್ರಿ 7 ಗಂಟೆಯ ಬಳಿಕ ಯಾತ್ರಿಗಳ ಬಸ್‌ ಸಂಚಾರಕ್ಕೆ ನಿಷೇಧವಿದ್ದರೂ ಅದು ಸಂಚರಿಸುತ್ತಿತ್ತು.

ಅಮರನಾಥ ಯಾತ್ರಾ ಮಂಡಳಿಯಿಂದ ಸಂಚಾ  ರಕ್ಕೆ ದಾಳಿಗೆ ಒಳಗಾದ ಬಸ್‌ಗೆ ಅನುಮತಿ ಪತ್ರ ಇರಲಿಲ್ಲ. ಇದೇ ಸಂದರ್ಭದಲ್ಲಿ ಪೊಲೀಸ್‌ ಬೆಂಗಾವಲು ಪಡೆಯನ್ನು ಗುರಿಯಾಗಿರಿಸಿ  ಕೊಂಡು ಉಗ್ರರು ಮನಬಂದಂತೆ ಗುಂಡು ಹಾರಿಸಿದರು. ಅದಕ್ಕೆ ಪ್ರತ್ಯುತ್ತರವಾಗಿ ಪೊಲೀಸರು ಉಗ್ರರ ಗುಂಪಿನತ್ತ ಗುಂಡು ಹಾರಿಸಿದಾಗ ಅವರು ಪರಾರಿಯಾಗಿದ್ದಾರೆ. ಅನಂತನಾಗ್‌ ಜಿಲ್ಲೆಯ ಬಂಟೆಂಗೂ ಮತ್ತು ಖನಬಾಲ್‌ ಪ್ರದೇಶದಲ್ಲಿ ಉಗ್ರರು ಪ್ರತ್ಯೇಕವಾಗಿ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ಇಬ್ಬರು, ತೀವ್ರವಾಗಿ ಗಾಯಗೊಂಡ ನಾಲ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಮತ್ತು ಆಸ್ಪತ್ರೆಯಲ್ಲಿ ಒಬ್ಬರು ಅಸುನೀಗಿದ್ದಾರೆ. ಗಾಯಗೊಂಡವರನ್ನು ಅನಂತ್‌ನಾಗ್‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಗುಜರಾತ್‌ ನ ನೋಂದಣಿ ಸಂಖ್ಯೆ ಹೊಂದಿದೆ.

ಕಾರ್ಯಚರಣೆ ವೇಳೆಯೂ ದಾಳಿ: ನಿಂದನಾತ್ಮಕ ಅಂಶವೆಂದರೆ ಪೊಲೀಸರು, ಯೋಧರು ಗಾಯಗೊಂಡ ಯಾತ್ರಿಗಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಕೂಡ ದಯೆ ತೋರದ ಉಗ್ರರು ಆ ಸಂದರ್ಭದಲ್ಲಿಯೂ ಗುಂಡು ಹಾರಿಸಿದ್ದಾರೆ.

ಬಿಗಿಭದ್ರತೆ: ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಲೇ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ ಪಿಎಫ್) ಎರಡು ತುಕಡಿಗಳನ್ನು ಸ್ಥಳಕ್ಕೆ ಕಳುಹಿ  ಸಿದೆ. ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕಣಿವೆ ರಾಜ್ಯಾದ್ಯಂತ ಇಂಟರ್‌ನೆಟ್‌ ಸಂಪರ್ಕ ಕಡಿತಗೊಳಿಸಲಾಗಿದೆ. 

ಪ್ರಧಾನಿ ಖಂಡನೆ: ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಅಜಿತ್‌ ದೋವಲ್‌ ಪ್ರಧಾನಿ ನರೇಂದ್ರ ಮೋದಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಟ್ವೀಟ್‌ ಮಾಡಿ ಘಟನೆಯನ್ನು ಖಂಡಿಸಿರುವ ಮೋದಿ ರಾಜ್ಯಪಾಲ ಎನ್‌. ಎನ್‌.ವೋರಾ, ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ಜತೆಗೆ ಮಾತುಕತೆ ನಡೆಸಿದ್ದಾಗಿ ಬರೆದುಕೊಂಡಿದ್ದಾರೆ. “ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದವರ ಮೇಲೆ ದಾಳಿಯಾದ ಸುದ್ದಿ ಕೇಳಿದೆ. ಅದನ್ನು ಖಂಡಿಸಲು ಶಬ್ದಗಳೇ ಸಿಗುತ್ತಿಲ್ಲ. ಎಲ್ಲರಿಂದಲೂ ಅದಕ್ಕೆ ಅತ್ಯುಗ್ರ ಶಬ್ದಗಳಿಂದ ಖಂಡಿಸಬೇಕು’ ಎಂದು ಹೇಳಿದ್ದಾರೆ.

ದುರಂತದಲ್ಲಿ ಅಸುನೀಗಿದವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರಿಗೆ ಅಗಲುವಿಕೆ
ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ ಪ್ರಧಾನಿ ಮೋದಿ. ಇಂಥ ಕೃತ್ಯಗಳಿಂದ ಭಾರತ ಎದೆಗುಂದುವುದಿಲ್ಲ. ಅದನ್ನು ಮೆಟ್ಟಿ ನಿಲ್ಲುವ ಶಕ್ತಿ ಭಾರತಕ್ಕೆ ಇದೆ ಎಂದು ಮತ್ತೂಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಗಮನಾರ್ಹ ಅಂಶವೆಂದರೆ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಕಣಿವೆ ರಾಜ್ಯದಲ್ಲಿ ಉಂಟಾಗಿರುವ ದುರಂತದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಕೂಡ ಮುಖ್ಯಮಂತ್ರಿ, ರಾಜ್ಯಪಾಲರ ಜತೆ ಫೋನ್‌ನಲ್ಲಿ ಮಾತಾಡಿದ್ದಾರೆ. ರಕ್ಷಣಾ ಸಚಿವ ಅರುಣ್‌ ಜೇಟ್ಲಿ ಅವರೂ ಘಟನೆ ಬಗ್ಗೆ ಖಂಡಿಸಿದ್ದಾರೆ.

ಬಂದ್‌ಗೆ ಕರೆ: ಘಟನೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರ ಪ್ಯಾಂಥರ್ಸ್‌ ಪಕ್ಷ ಮಂಗಳವಾರ ಕಣಿವೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಿದೆ.

ಹೈಅಲರ್ಟ್‌: ಗುಜರಾತ್‌ನ ಕೆಲ ಭಾಗ ಪಾಕಿಸ್ತಾನದ ಜತೆ ಅಂತಾರಾಷ್ಟ್ರೀಯ ಗಡಿ ಪ್ರದೇಶ ಹೊಂದಿರುವುದರಿಂದ ಅಲ್ಲಿ ಗರಿಷ್ಠ ಪ್ರಮಾಣದ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿಯೇ ಹೊಣೆ ಹೊರಬೇಕು ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಇದೊಂದು ಗಂಭೀರ ಭದ್ರತಾ ಲೋಪ. ಪ್ರಧಾನಿಯವರೇ ಈ ಬಗ್ಗೆ ಹೊಣೆ ಹೊತ್ತುಕೊಂಡು ಇಂಥ ಘಟನೆಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ. 

ಭದ್ರತಾ ಲೋಪ?
ಮತ್ತೂಂದು ಬೆಳವಣಿಗೆಯಲ್ಲಿ ಅಮರನಾಥ ಯಾತ್ರಿಗಳ ಮೇಲೆ ಉಗ್ರರು ದಾಳಿ ನಡೆಸಲಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ನೀಡಿತ್ತು. ಕೇಂದ್ರ ಗೃಹ ಇಲಾಖೆಯ ಬಳಿ ಇರುವ ವರದಿಯನ್ನು ಆಧರಿಸಿ ಆಂಗ್ಲ ಸುದ್ದಿವಾಹಿನಿಯೊಂದು ವರದಿ ಪ್ರಕಟಿಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದೊಂದು ಅಮಾನವೀಯ ಘಟನೆ ಮತ್ತು ಮಾನವೀಯತೆಯ ವಿರುದ್ಧದ ಘೋರ ಅಪರಾಧ. ಭದ್ರತಾ ಲೋಪವಿದ್ದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ  
ಸೋನಿಯಾ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷೆ

ಇದೊಂದು ಖಂಡನೀಯ ಘಟನೆ. ಉಗ್ರರ ಕೃತ್ಯದಿಂದ ಸಾವಿಗೀಡಾದವರ ಆತ್ಮಕ್ಕೆ ಶಾಂತಿ ಸಿಗಲಿ.
ಅರುಣ್‌ ಜೇಟ್ಲಿ, ರಕ್ಷಣಾ ಸಟ್ಲಿ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.