ಕಾರು-ಟ್ರಕ್ ಮುಖಾಮುಖಿ ಢಿಕ್ಕಿಯಾಗಿ 7 ಮಂದಿ ದುರ್ಮರಣ
Team Udayavani, May 11, 2019, 10:43 AM IST
ಗ್ವಾಲಿಯರ್: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಮಕ್ಕಳು , ಇಬ್ಬರು ಮಹಿಳೆಯರು ಸೇರಿ 7 ಮಂದಿ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಶನಿವಾರ ಬೆಳಗ್ಗೆ ಸಂಭವಿಸಿದೆ.
ವರದಿಯಾದಂತೆ ಮಾರು ತಿ ವ್ಯಾನ್ ನಿಯಂತ್ರಣ ತಪ್ಪಿ ಸರಕು ಸಾಗಾಣಿಕೆ ಮಾಡುತ್ತಿದ್ದ ಟ್ರಕ್ಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಕಾರಿನಲ್ಲಿ9 ಮಂದಿ ಪ್ರಯಾಣಿಸುತ್ತಿದ್ದರು. 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.