70 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು !
Team Udayavani, Nov 19, 2020, 5:16 PM IST
ಮಧ್ಯಪ್ರದೇಶ: 70 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ದಾರುಣ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯ ಒಲ್ಲಿಜಾ ಗ್ರಾಮದಲ್ಲಿ ನಡೆದಿದೆ.
ವೃದ್ದೆಯು ಹೊಲದಲ್ಲಿ ಬೆಳೆಗಳಿಗೆ ನೀರು ಹಾಯಿಸಲು ತೆರಳಿದ ಸಂದರ್ಭದಲ್ಲಿ, ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಮಾತ್ರವಲ್ಲದೆ ವೃದ್ದೆಯು ಕಿರುಚಾಡದಂತೆ ಬಾಯಿಗೆ ಮಣ್ಣು ತುರುಕಿದ್ದು, ಖಾಸಗಿ ಅಂಗಕ್ಕೂ ಕೂಡ ಕೋಲನ್ನು ತುರುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಲದಲ್ಲಿ ವಿವಸ್ತ್ರವಾಗಿದ್ದ ವೃದ್ದೆಯ ಶವವನ್ನು ಗ್ರಾಮಸ್ಥರೊಬ್ಬರು ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವೃದ್ದೆಯ ಕುಟುಂಬಸ್ಥರಿಗೂ ಮಾಹಿತಿ ನೀಡಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ 10 ವರ್ಷಜೈಲು ಶಿಕ್ಷೆ
ಇದೊಂದು ಭಯಾನಕ ಘಟನೆಯಾಗಿದ್ದು, ಸಂತ್ರಸ್ತೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗ್ಯಾರಸ್ ಪುರ್ ಪೊಲೀಸ್ ಠಾಣೆಯ ಅಧಿಕಾರಿ ಮಹೇಂದ್ರ ಸಖ್ಯಾ ತಿಳಿಸಿದ್ದಾರೆ.
ಕೃಷಿ ಚಟುವಟಿಕೆಗಾಗಿ ಗ್ರಾಮದ ಹೊರವಲಯದಲ್ಲಿ ಭೂಮಿಯನ್ನು ಕೊಳ್ಳಲಾಗಿತ್ತು. ವೃದ್ದೆಯು ಪ್ರತಿನಿತ್ಯ ಹೊಲಕ್ಕೆ ತೆರಳಿ ಬೆಳೆಗಳಿಗೆ ನಿರು ಹಾಯಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದ್ದು, ಗ್ರಾಮಸ್ಥರು ಪೊಲೀಸ್ ಠಾಣೆಗೆ ಧಾವಿಸಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಸರ್ಕಾರ ರಚನೆಯಾಗಿ ಮೂರೇ ದಿನದಲ್ಲಿ ನಿತೀಶ್ ಸಂಪುಟದ ಮೊದಲ ವಿಕೆಟ್ ಔಟ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ
ಭಾರೀ ಮಳೆ, ಪ್ರವಾಹ ಹಿನ್ನೆಲೆ : ವೈಷ್ಣೋ ದೇವಿ ಯಾತ್ರೆ ತಾತ್ಕಾಲಿಕ ಸ್ಥಗಿತ
ಭೀಕರ ರಸ್ತೆ ಅಪಘಾತ ; ತೀರ್ಥಯಾತ್ರೆಗೆ ತೆರಳಿದ್ದ 7 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಫೂಟ್ ಓವರ್ ಬ್ರಿಡ್ಜ್ ನಲ್ಲಿ ಆಟೋ ಚಲಾಯಿಸಿ ಸುದ್ದಿಯಾದ ಚಾಲಕ; ವಿಡಿಯೋ ವೈರಲ್
ಶಿಕ್ಷೆ ವಿಸ್ತರಣೆ ಮೊದಲು ಅಪರಾಧಿಯ ಅಭಿಪ್ರಾಯ ಆಲಿಸಿ; ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಸಲಹೆ
MUST WATCH
ಹೊಸ ಸೇರ್ಪಡೆ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್ಐಆರ್
ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ
ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ
ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ