ಭಾರತ ಮತ್ತು ಚೀನಾ ದ್ವಿಪಕ್ಷೀಯ ಬಾಂಧವ್ಯಕ್ಕೆ 70 ವರ್ಷ, ಎಪ್ಪತ್ತು ಕಾರ್ಯಕ್ರಮ

Team Udayavani, Nov 22, 2019, 11:13 PM IST

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಬಾಂಧವ್ಯಕ್ಕೆ 70 ವರ್ಷಗಳು ಸಮೀಪಿಸುತ್ತಿರುವ ಹಿನ್ನೆಲೆಯನ್ನು ಅದನ್ನು ಅದ್ಧೂರಿಯಿಂದ ಆಚರಿಸಲು ಎರಡೂ ರಾಷ್ಟ್ರಗಳು ತೀರ್ಮಾನಿಸಿವೆ. ಅದಕ್ಕಾಗಿ 70 ರೀತಿಯ ಕಾರ್ಯ ಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಮಹಾಬಲಿಪುರಂನಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ನಡುವಿನ ಅನೌಪಚಾರಿಕ ಮಾತುಕತೆ ವೇಳೆ ಈ ಬಗ್ಗೆ ನಿರ್ಧರಿಸಲಾಗಿತ್ತು. ಎರಡೂ ರಾಷ್ಟ್ರಗಳ ನಡುವೆ ಸಂಸದೀಯ ನಿಯೋಗಗಳ ಕಳುಹಿಸುವಿಕೆ, ಎರಡೂ ರಾಷ್ಟ್ರಗಳ ನಡುವೆ ಇರುವ ಐತಿಹಾಸಿಕ ಬಾಂಧವ್ಯಗಳ ಬಗ್ಗೆ ಇರುವ ಕಾರ್ಯಕ್ರಮಗಳು, ಇತ್ತೀಚಿನ ವರ್ಷಗಳಲ್ಲಿ ಬೆಳೆದು ಬಂದಿರುವ ದ್ವಿಪಕ್ಷೀಯ ಬಾಂಧವ್ಯದ ಬಗ್ಗೆ ಕಾರ್ಯಕ್ರಮಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಶುಕ್ರವಾರ ತಿಳಿಸಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ