ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ
Team Udayavani, Jan 26, 2022, 11:34 AM IST
ಪಣಜಿ: ಗೋವಾದ ಎಲ್ಲ ಗ್ರಾಮಗಳು ಮತ್ತು ಜನರನ್ನು ತಲುಪುವುದು, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯವನ್ನು ಸ್ವಯಂಪೂರ್ಣ ಗೋವಾ ಅಡಿಯಲ್ಲಿ ನಡೆಸಲಾಗುತ್ತಿದೆ. ಗೋವಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ಮನವಿ ಮಾಡಿದರು.
73ನೇ ಗಣರಾಜ್ಯೋತ್ಸವದ ಅಂಗವಾಗಿ ಪಣಜಿಯ ಕಾಂಪಾಲ್‍ನಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕೋವಿಡ್-19 ವ್ಯಾಕ್ಸಿನೇಶನ್ ನಮ್ಮ ಆರ್ಥಿಕ ಚಟುವಟಿಕೆಯನ್ನು ಮರಳಿ ಟ್ರ್ಯಾಕ್ ಮೇಲೆ ತರಲು ಸಹಾಯವಾಗಿದೆ. ಸ್ವತಂತ್ರ ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ದೇಶದ ಮತದಾರರು ಪ್ರತಿಪಕ್ಷಗಳಿಗೆ ಮಹತ್ವದ ಪಾತ್ರ ವಹಿಸುವ ಅವಕಾಶ ನೀಡಿದ್ದಾರೆ. ಮತದಾನದ ಹಕ್ಕು ಪ್ರಜಾಪ್ರಭುತ್ವದ ಆಧಾರವಾಗಿದೆ ಎಂದು ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಗೋವಾ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಶುಭಾಶಯ ಕೋರಿದರು.