ಹಳಿ ತಪ್ಪಿದ ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ ಎಂಟು ಬೋಗಿಗಳು
Team Udayavani, Jan 2, 2023, 8:56 AM IST
ಪಾಲಿ: ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ ಎಂಟು ಬೋಗಿಗಳು ಹಳಿ ತಪ್ಪಿದ ಘಟನೆ ರಾಜಸ್ಥಾನದ ಪಾಲಿ ಬಳಿ ಸೋಮವಾರ ಮುಂಜಾನೆ ನಡೆದಿದೆ.
ಜೋಧ್ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ಮುಂಜಾನೆ 3:27ಕ್ಕೆ ಈ ಘಟನೆ ನಡೆದಿದೆ. ಬಾಂದ್ರಾ ಟರ್ಮಿನಸ್ ನಿಂದ ಹೊರಟ ರೈಲು ಜೋಧ್ ಪುರಕ್ಕೆ ತೆರಳುತ್ತಿತ್ತು.
ವಾಯುವ್ಯ ರೈಲ್ವೇ ಇಲಾಖೆಯ ಮಾಹಿತಿಯ ಪ್ರಕಾರ, ಯಾವುದೇ ಸಾವುನೋವಿನ ವರದಿಯಾಗಿಲ್ಲ. ಜೋಧ್ ಪುರದಿಂದ ಅಪಘಾತ ಪರಿಹಾರ ರೈಲನ್ನು ಕಳುಹಿಸಲಾಗಿದೆ.
ಇದನ್ನೂ ಓದಿ:ಯೋ-ಯೋ ಟೆಸ್ಟ್ ಜತೆಗೆ “ಡೆಕ್ಸಾ’ ಕಡ್ಡಾಯ: ವರ್ಷಾರಂಭದ ಸಭೆ ನಡೆಸಿದ ಬಿಸಿಸಿಐ
“ಉನ್ನತ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪುವ ನಿರೀಕ್ಷೆಯಿದೆ. ವಾಯುವ್ಯ ರೈ್ವೆಯ ಜನರಲ್ ಮ್ಯಾನೇಜರ್ ಮತ್ತು ಇತರ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ” ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ