ಟೆಂಪೋ-ಟ್ರಕ್ ಮುಖಾಮುಖೀ ಢಿಕ್ಕಿ : ಎಂಟು ಸಾವು; ಮೂವರ ಸ್ಥಿತಿ ಗಂಭೀರ
Team Udayavani, Jul 6, 2019, 5:47 PM IST
ಔರಾಯಿಯಾ, ಉತ್ತರ ಪ್ರದೇಶ : ಇಂದು ಶನಿವಾರ ಇಲ್ಲಿ ನಸುಕಿನ ವೇಳೆ ಟೆಂಪೋ ಮತ್ತು ಟ್ರಕ್ ನಡುವೆ ನಡೆದ ನೇರ ಢಿಕ್ಕಿಯಲ್ಲಿ ಎಂಟು ಮಂದಿ ಮೃತಪಟ್ಟು ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಬೆಳಗ್ಗೆ 6.30ರ ಸುಮಾರಿಗೆ ದಿಬಿಯಾಪುರ-ಬೇಲಾ ರಸ್ತೆಯಲ್ಲಿ ತನ್ನ ಮುಂದಿದ್ದ ಟೆಂಪೋವನ್ನು ಹಿಂದಿಕ್ಕಲು ಯತ್ನಿಸಿ ಮುಂದಕ್ಕೆ ಧಾವಿಸಿದ ಟೆಂಪೋ, ಎದುರುಗಡೆಯಿಂದ ಧಾವಿಸಿ ಬರುತ್ತಿದ್ದ ಟ್ರಕ್ಕಿಗೆ ಢಿಕ್ಕಿ ಹೊಡೆಯಿತು.
ಪರಿಣಾಮವಾಗಿ ಟೆಂಪೋದಲ್ಲಿದ್ದವರ ಪೈಕಿ ಎಂಟು ಮಂದಿ ಸ್ಥಳದಲ್ಲೇ ಸಾವಪ್ಪಿದರು. ಇತರ ಮೂವರು ಗಂಭೀರವಾಗಿ ಗಾಯಗೊಂಡರು ಎಂದು ಪೊಲೀಸ್ ಸುಪರಿಂಟೆಂಡೆಂಟ್ ಸುನೀತಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಶೋಕ, ಆಘಾತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…