ಭೋಪಾಲ್ : ಎಂಟರ ಬಾಲಕಿಯ ಮೇಲೆ ಸಹಪಾಠಿ ಬಾಲಕನಿಂದ ರೇಪ್
Team Udayavani, Dec 27, 2018, 5:48 PM IST
ಭೋಪಾಲ್ : ಅತ್ಯಂತ ಆಘಾತಕಾರಿ ಘಟನೆಯೊಂದರಲ್ಲಿ ಎಂಟು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯದೇ ತರಗತಿಯ ಹುಡುಗನೊಬ್ಬ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ತಂದೆ ಕೊಟ್ಟಿರುವ ಪೊಲೀಸ್ ದೂರಿನಲ್ಲಿ ಅಪರಿಚಿತ ಬಾಲಕನೋರ್ವ ಕೂಡ ಈ ಅತ್ಯಾಚಾರದಲ್ಲಿ ಶಾಮೀಲಾಗಿದ್ದಾನೆ ಎಂದು ದಾಖಲಿಸಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಅದರ ವರದಿ ಇನ್ನಷ್ಟೇ ಪೊಲೀಸರ ಕೈಸೇರಬೇಕಿದೆ. ಈ ನಡುವೆ ಈ ಆಘಾತಕಾರಿ ಘಟನೆಯ ಬಗ್ಗೆ ತನಿಖೆ ನಡೆಸುವುದಕ್ಕೆ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ.
ಬಾಲಕಿಯ ಮೇಲಿನ ಅತ್ಯಾಚಾರ ಘಟನೆಯು ಕಳೆದ ಮಂಗಳವಾರ ಆಕೆಯ ಮನೆ ಸಮೀಪವೇ ನಡೆದಿದೆ. ಬುಧವಾರ ಹೆತ್ತವರು ಪೊಲೀಸರನ್ನು ಸಂಪರ್ಕಿಸಿದ ಬಳಿಕ ಕೇಸು ದಾಖಲಾಗಿದೆ.
ದಾಖಲಾಗಿರುವ ದೂರಿನ ಪ್ರಕಾರ ಎಂಟು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಹಪಾಠಿ ಬಾಲಕ ಮತ್ತು ಅಪರಿಚಿತ ಬಾಲಕ ಸೇರಿಕೊಂಡು ಅತ್ಯಾಚಾರ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ದಿನೇವ್ ಕೌಶಲ್ ಮಾಧ್ಯಮಕ್ಕೆ ತಿಳಿಸಿದರು.
ಪೊಲೀಸರು ಈ ತನಕ ಈ ಘಟನೆ ಸಂಬಂಧ ಯಾರನ್ನೂ ಬಂಧಿಸಿಲ್ಲ; ಆರೋಪಿಗಳಿಬ್ಬರೂ ಅಪ್ರಾಪ್ತ ವಯಸ್ಸಿನ ಬಾಲಕರೇ ಆಗಿರುವುದರಿಂದ ಅವರನ್ನು ಬಂಧಿಸಿಲ್ಲ. ಐಪಿಸಿ ಸೆ.376 ಮತ್ತು ಪೋಕ್ಸೋ ಕಾಯಿದೆಯಡಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ; ಮಹಿಳಾ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್ಐಟಿ ರೂಪಿಸಲಾಗಿದೆ ಎಂದು ಭೋಪಾಲ್ ದಕ್ಷಿಣದ ಪೊಲೀಸ್ ಸುಪರಿಂಟೆಂಡೆಂಟ್ ರಾಹುಲ್ ಲೋಧಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ