ಆಧಾರ್ ಕಾರ್ಡಿಂದ 80 ಸಾವಿರ ನಕಲಿ ಪ್ರಾಧ್ಯಾಪಕರ ಪತ್ತೆ
Team Udayavani, Jan 6, 2018, 9:25 AM IST
ಹೊಸದಿಲ್ಲಿ: ದೇಶದ ವಿವಿಧ ಕಾಲೇಜುಗಳು ಮತ್ತು ವಿವಿಗಳಲ್ಲಿ 80 ಸಾವಿರ ನಕಲಿ ಪ್ರಾಧ್ಯಾಪಕರನ್ನು ಪತ್ತೆ ಮಾಡಲಾಗಿದೆ. ಅದೂ ಆಧಾರ್ ಕಾರ್ಡ್ ಬಳಕೆ ಮಾಡಿ! ಈ ಮಾಹಿತಿಯನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ನೀಡಿದ್ದಾರೆ. ಕೇಂದ್ರೀಯ ವಿವಿಗಳಲ್ಲಿ ಇಂಥ ಪ್ರಕರಣಗಳು ಪತ್ತೆಯಾಗಿಲ್ಲ ಎಂದಿದ್ದಾರೆ. ಜತೆಗೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಕೆಲವು ಮಂದಿ ಬೇರೆ ಬೇರೆ ಹೆಸರಿನಲ್ಲಿ ಹಲವು ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಉದ್ಯೋಗ ನಿರತರಾಗಿದ್ದರು. ಪ್ರಾಧ್ಯಾಪಕರ ಜತೆಗೆ ವಿದ್ಯಾರ್ಥಿಗಳು ಮತ್ತು ಇತರ ಉದ್ಯೋಗಿಗಳಿಗೂ ಆಧಾರ್ ಸಂಖ್ಯೆ ನೀಡಲು ಸೂಚಿಸಲಾಗಿದೆ. ಈ ಮೂಲಕ ಒಂದಕ್ಕಿಂತ ಹೆಚ್ಚಿನ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲು ಸಾಧ್ಯ ಎಂದಿದ್ದಾರೆ ಸಚಿವ ಜಾವಡೇಕರ್.
ದುರ್ಬಳಕೆಯೇ ಹೆಚ್ಚು: ಆಧಾರ್ ಮಾಹಿತಿ ಸೋರಿಕೆ ಆರೋಪ ಕುರಿತು ಮಾಹಿತಿದಾರ ಎಡ್ವರ್ಡ್ ಸ್ನೋಡೆನ್ ಟ್ವೀಟ್ ಮಾಡಿದ್ದು, ಬಹಿರಂಗವಾಗಿರುವ ಮಾಹಿತಿ ದುರ್ಬಳಕೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ