ರಾಜಸ್ಥಾನ್ ಸರ್ಕಾರಿ ಆಸ್ಪತ್ರೆ: ಒಂದೇ ಗಂಟೆಯಲ್ಲಿ ಒಂಬತ್ತು ನವಜಾತ ಶಿಶುಗಳ ಸಾವು
ಜಿಲ್ಲಾಧಿಕಾರಿ ಉಜ್ವಲ್ ರಾಥೋಡ್ ಆಸ್ಪತ್ರೆಗೆ ಭೇಟಿ ನೀಡಿ ಸಭೆ ನಡೆಸಿರುವುದಾಗಿ ವರದಿ ತಿಳಿಸಿದೆ.
Team Udayavani, Dec 11, 2020, 10:30 AM IST
ಜೈಪುರ್:ಕೇವಲ ಒಂದು ಗಂಟೆ ಅವಧಿಯಲ್ಲಿ ಒಂಬತ್ತು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ಹೀಗೆ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದು, ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ರಾಜಸ್ಥಾನದ ಕೋಟಾದ ಜೆಕೆ ಲೋನ್ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ (ಡಿಸೆಂಬರ್ 09, 2020) ಐದು ನವಜಾತ ಶಿಶುಗಳು ಹಾಗೂ ಗುರುವಾರ (ಡಿಸೆಂಬರ್ 10, 2020) ನಾಲ್ಕು ಶಿಶುಗಳು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಘಟನೆ ಕುರಿತು ತನಿಖೆ ನಡೆಸಲು ಆರೋಗ್ಯ ಸಚಿವ ರಘು ಶರ್ಮಾ ಆದೇಶ ನೀಡಿರುವುದಾಗಿ ವರದಿ ಹೇಳಿದೆ.
“ನವಜಾತ ಶಿಶುಗಳ” ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆ ಸೂಪರಿಟೆಂಡೆಂಟ್ ಸುರೇಶ್ ದುಲಾರಾ, ಇದು ಸಹಜವಾಗಿ ಸಂಭವಿಸಿದ ಸಾವು, ಯಾವುದೇ ಗಂಭೀರ ಕಾರಣ ಅಥವಾ ಸೋಂಕಿನಿಂದ ಆಗಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ವಿಶ್ವದ ಬೃಹತ್ ಸ್ಟೇಡಿಯಂನಲ್ಲಿ ನಡೆಯಲಿದೆ ಭಾರತ- ಇಂಗ್ಲೆಂಡ್ ಪಿಂಕ್ ಬಾಲ್ ಟೆಸ್ಟ್
ಕೋಟಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಆರೋಗ್ಯ ಸಚಿವರಿಗೆ ಕಳುಹಿಸಿರುವ ವರದಿಯಲ್ಲಿ, ಜೆಕೆ ಲೋನ್ ಆಸ್ಪತ್ರೆಯಲ್ಲಿನ ಕೆಲವು ಶಿಶುಗಳು ಜನಿಸುವಾಗಲೇ ವಿಕೃತವಾಗಿದ್ದು ಸಹಜ ಸಾವು ಸಂಭವಿಸಿದೆ. ಉಳಿದವು ಆಕಸ್ಮಿಕವಾಗಿ ಸಂಭವಿಸಿದ ಸಾವುಗಳಾಗಿದೆ ಎಂದು ವಿವರಿಸಿದ್ದಾರೆ.
ಘಟನೆ ಬಗ್ಗೆ ತಿಳಿದ ಡಿವಿಜನಲ್ ಕಮಿಷನರ್ ಕೆಸಿ ಮೀನಾ ಹಾಗೂ ಜಿಲ್ಲಾಧಿಕಾರಿ ಉಜ್ವಲ್ ರಾಥೋಡ್ ಆಸ್ಪತ್ರೆಗೆ ಭೇಟಿ ನೀಡಿ ಸಭೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ
ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ
ಲೂಧಿಯಾನ ಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಎನ್ಐಎ; ಪ್ರಮುಖ ಆರೋಪಿಯ ಬಂಧನ
ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು
ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಎಸ್ ಯುವಿ: ಮದುವೆ ಮನೆಯಿಂದ ಬರುತ್ತಿದ್ದ 8 ಮಂದಿ ಸಾವು!