ಉಗ್ರ ಸಂಘಟನೆಗೆ ಸೇರಿದ ಸಂಶೋಧನಾ ವಿದ್ಯಾರ್ಥಿ
Team Udayavani, Jan 9, 2018, 6:50 AM IST
ಹೊಸದಿಲ್ಲಿ: ಅಲಿಗಢ ಮುಸ್ಲಿಂ ವಿವಿಯಲ್ಲಿ ಭೂಗರ್ಭ ಶಾಸ್ತ್ರದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಮನ್ನಾನ್ ಬಶೀರ್ ವಾನಿ ಎಂಬಾತ ರಜೆಗೆಂದು ಕಾಶ್ಮೀರಕ್ಕೆ ತೆರಳಿದ್ದವನು ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿರುವ ವಿಷಯ ಬೆಳಕಿಗೆ ಬಂದಿದೆ. ಬಶೀರ್ ಬಂದೂಕು ಹಿಡಿದಿರುವ ಫೋಟೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಕಳೆದ ವರ್ಷ ಶ್ರೀನಗರಕ್ಕೆ ತೆರಳುತ್ತಿದ್ದಾಗ ಸೇನಾ ಸಿಬಂದಿ ನನ್ನನ್ನು ಅವಮಾನಿಸಿದ್ದರು ಎಂದು ಆತ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದ. ಆ ಘಟನೆಯೇ ಆತ ಉಗ್ರ ಸಂಘಟನೆಗೆ ಸೇರಲು ಪ್ರೇರೇಪಿಸಿರಬಹುದು ಎಂದು ಆತನ ಸ್ನೇಹಿತರೊಬ್ಬರು ಹೇಳಿದ್ದಾರೆ. ಮೂಲತಃ ಆತ ಮಾನವ ಹಕ್ಕುಗಳ ಪ್ರತಿಪಾದಕ. ಆತ ಉಗ್ರ ಸಂಘಟನೆಗೆ ಸೇರಿದ್ದು ನಮಗೂ ಆಶ್ಚರ್ಯ ತರಿಸಿದೆ ಎಂದು ಸ್ನೇಹಿತರು ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಅಲಿಗಡ ವಿವಿಯಿಂದ ವಾನಿಯನ್ನು ವಜಾ ಮಾಡಲಾಗಿದೆ.
ಈ ನಡುವೆ, ಶ್ರೀನಗರದಲ್ಲಿ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಪಾಕಿಸ್ಥಾನದ ರಾಷ್ಟ್ರಗೀತೆ ಹಾಡಿದ ಆರೋಪದಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ