ಪೂನಾವಾಲಾನ ನ್ಯಾಯಾಂಗ ಬಂಧನ 14 ದಿನಗಳವರೆಗೆ ವಿಸ್ತರಣೆ
ಗಲ್ಲು ಶಿಕ್ಷೆ ಆಗಲೇಬೇಕು ಎಂದು ಒತ್ತಾಯಿಸಿದ ಶ್ರದ್ದಾ ತಂದೆ..
Team Udayavani, Dec 9, 2022, 2:24 PM IST
ನವದೆಹಲಿ : ಶ್ರದ್ಧಾ ವಾಲ್ಕರ್ ಅವರ ಘೋರ ಅಂತ್ಯಕ್ಕೆ ಕಾರಣವಾದ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ನ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ಶುಕ್ರವಾರ ನ್ಯಾಯಾಲಯ ವಿಸ್ತರಿಸಿದೆ ಎಂದು ಮೂಲಗಳು ತಿಳಿಸಿವೆ.
ಪೂನಾವಾಲಾ ನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ. ನವೆಂಬರ್ 26 ರಂದು ಪ್ರಕರಣದ ಕೊನೆಯ ವಿಚಾರಣೆಯಲ್ಲಿ, ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು 13 ದಿನಗಳವರೆಗೆ ವಿಸ್ತರಿಸಿತ್ತು.
ಹತ್ಯೆಗೀಡಾದ ಶ್ರದ್ಧಾ ವಾಲ್ಕರ್ ಅವರ ತಂದೆ ವಿಕಾಸ್ ವಾಲ್ಕರ್ ಶುಕ್ರವಾರ ತಮ್ಮ ಮಗಳನ್ನು ಕೊಂದ ಆಕೆಯ ಲಿವ್ ಇನ್ ಪಾಲುದಾರ ಆಫ್ತಾಬ್ ಪೂನಾವಾಲಾನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
“ನನ್ನ ಮಗಳನ್ನು ಕೊಂದಿದ್ದಕ್ಕಾಗಿ ಆಫ್ತಾಬ್ ಪೂನಾವಾಲಾಗೆ ಗಲ್ಲು ಶಿಕ್ಷೆಯನ್ನು ನೀಡಲೇ ಬೇಕಾಗಿದೆ… ಪೂನಾವಾಲಾ ಮತ್ತು ಪ್ರಕರಣದಲ್ಲಿ ಭಾಗವಹಿಸಿರುವ ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ ನಂತರ ವಿಕಾಸ್ ವಾಲ್ಕರ್ ಸುದ್ದಿಗಾರರಿಗೆ ಹೇಳಿದ್ದಾರೆ.
ಪೂನಾವಾಲಾ ಶ್ರದ್ಧಾಳನ್ನು ಕತ್ತು ಹಿಸುಕಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 300-ಲೀಟರ್ ಫ್ರಿಡ್ಜ್‌ನಲ್ಲಿ ಸುಮಾರು ಮೂರು ವಾರಗಳ ಕಾಲ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಇರಿಸಿ ಈ ವರ್ಷದ ಮೇ ತಿಂಗಳಲ್ಲಿ ನಗರದಾದ್ಯಂತ ಎಸೆದಿದ್ದ.
ಮಕ್ಕಳ ಮೇಲೆ ನಿಯಂತ್ರಣವಿರಲಿ: ಶ್ರದ್ಧಾ ತಂದೆ
ಹದಿನೆಂಟು ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಕೊಂಚ ನಿಯಂತ್ರಣ ಹೇರಬೇಕು. ಜತೆಗೆ ಅವರ ಆಪ್ತ ಸಮಾಲೋಚನೆ ನಡೆಸಬೇಕು ಎಂದು ನವದೆಹಲಿಯಲ್ಲಿ ಪ್ರಿಯಕರನಿಂದ ಹತ್ಯೆಗೆ ಒಳಗಾಗಿರುವ ಶ್ರದ್ಧಾ ವಾಕರ್ ಅವಳ ತಂದೆ ವಿಕಾಸ್ ವಾಕರ್ ಅಭಿಪ್ರಾಯಪಟ್ಟಿದ್ದಾರೆ.
“ನನ್ನ ಮಗಳು ಮನೆಯನ್ನು ತೊರೆಯುವ ವೇಳೆ, “ನಾನೀಗ ವಯಸ್ಕಳು’ ಎಂದಿದ್ದಳು. ಆದರೆ, ಈಗ ಏನಾಯಿತು ಎಂದು ಎಲ್ಲರಿಗೂ ಗೊತ್ತಿದೆ.
ಹೀಗೆ ಯಾರಿಗೂ ಆಗಬಾರದು. ಅದಕ್ಕಾಗಿ 18 ವರ್ಷ ಮತ್ತು ಮೇಲ್ಪಟ್ಟ ಮಕ್ಕಳನ್ನು ಕೊಂಚ ನಿಯಂತ್ರಿಸಬೇಕು. ಜತೆಗೆ ಅವರ ಜತೆಗೆ ಆಪ್ತ ಸಮಾಲೋಚನೆ ನಡೆಸಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಇನ್ನೂ ಜನಿಸದ ಕಂದಮ್ಮನಿಗಾಗಿ ಮಿಡಿದ ಸುಪ್ರೀಂಕೋರ್ಟ್!
ರಾಶಿ ಫಲ: ಧೀರ್ಘ ಪ್ರಯಾಣಕ್ಕೆ ಅವಕಾಶ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ