ಯುಪಿಯಲ್ಲಿ ಭೀಕರ ಅಪಘಾತ: 22 ಸಾವು,17 ಮಂದಿಗೆ ಗಂಭೀರ ಗಾಯ
Team Udayavani, Jun 5, 2017, 9:08 AM IST
ಬರೇಲಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಸೋಮವಾರ ಬೆಳಗಿನ ಜಾವ ಬಸ್ ಮತ್ತು ಸರಕು ಸಾಗಿಸುತ್ತಿದ್ದ ಲಾರಿ ಮುಖಾಮುಖೀ ಢಿಕ್ಕಿಯಾಗಿ ಬೆಂಕಿ ಹೊತ್ತಿ ಉರಿದ್ದಿದ್ದು, 22 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದು,17 ಮಂದಿ ಗಂಭೀರ ವಾಗಿ ಗಾಯಗೊಂಡ ಭೀಕರ ದುರಂತ ಸಂಭವಿಸಿದೆ.
ಅಪಘಾತವಾಗುತ್ತಿದ್ದಂತೆ ಬಸ್ ಹೊತ್ತಿ ಉರಿದಿದ್ದು ನಿದ್ರೆಯಲ್ಲಿದ್ದ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಬಸ್ನಿಂದ ಹೊರ ಬರಲು ಸಾಧ್ಯವಾಗದೆ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬಸ್ ಚಾಲಕನ ಅತೀಯಾದ ವೇಗವೆ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ.
ತಲಾ 2 ಲಕ್ಷ ರೂ. ಪರಿಹಾರ
ದುರ್ಘಟನೆಯ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ