Udayavni Special

ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್‌ ಬೆಳವಣಿಗೆಗೆ ಕಾರಣವೇನು…

ಅಚ್ಚರಿಯ ರೀತಿಯಲ್ಲಿ ಬಿಜೆಪಿ ಈ ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿತು.

Team Udayavani, Dec 1, 2020, 3:13 PM IST

ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್‌ ಬೆಳವಣಿಗೆಗೆ ಕಾರಣವೇನು

ಕಳೆದ ಲೋಕಸಭಾ ಚುನಾವಣೆವರೆಗೂ ಬಿಜೆಪಿಯನ್ನು ತೆಲಂಗಾಣದಲ್ಲಿ ಯಾರೂ ಗಂಭೀರವಾಗಿ ಪರಿಗಣಿಸಿಯೇ ಇರಲಿಲ್ಲ. ಈವರೆಗೆ ಪ್ರಾದೇಶಿಕ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳದೇ ಬಿಜೆಪಿ ಒಂದೇ ಒಂದು ಲೋಕಸಭಾ ಕ್ಷೇತ್ರವನ್ನು ಗೆದ್ದಿರಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕೂಡ ಬಿಜೆಪಿಯ ಪಾತ್ರ ನಗಣ್ಯವಾಗಿತ್ತು. ಪ್ರತಿ ಬಾರಿಯೂ ಇಲ್ಲಿ ಟಿಆರ್‌ಎಸ್‌ ಮತ್ತು ಕಾಂಗ್ರೆಸ್‌ ನಡುವೆ ನೇರ ಜಿದ್ದಾಜಿದ್ದಿ ಏರ್ಪಡುತ್ತಿತ್ತು.

ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿಯ ಸಾಧನೆ ಕೇವಲ ಟಿಆರ್‌ಎಸ್‌-ಕಾಂಗ್ರೆಸ್‌ ಅನ್ನು ಮಾತ್ರವಲ್ಲ, ರಾಜಕೀಯ ವಿಶ್ಲೇಷಕರೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿತ್ತು. 17 ಲೋಕಸಭಾ ಸೀಟುಗಳ ಪೈಕಿ ಕೇವಲ 9ರಲ್ಲಷ್ಟೇ ಜಯ ಗಳಿಸುವಲ್ಲಿ ಸಿಎಂ ಕೆ. ಚಂದ್ರಶೇಖರ್‌ ರಾವ್‌ ನೇತೃತ್ವದ ಟಿಆರ್‌ಎಸ್‌ ಯಶಸ್ವಿಯಾಗಿತ್ತು.

ಅಚ್ಚರಿಯ ರೀತಿಯಲ್ಲಿ ಬಿಜೆಪಿ ಈ ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿತ್ತು. ಕಾಂಗ್ರೆಸ್‌ 3 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಕಳೆದ ಡಿಸೆಂಬರ್‌ನಲ್ಲಿ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆದು ಸರ್ಕಾರ ರಚಿಸಿದ್ದ ಕೆಸಿಆರ್‌, ಲೋಕಸಭೆ ಚುನಾವಣೆಯಲ್ಲಿ ಇಷ್ಟೊಂದು ಹಿನ್ನಡೆಯಾಗುತ್ತದೆ ಎಂದು ಊಹಿಸಿಯೇ ಇರಲಿಲ್ಲ.

ಅವರ ಪುತ್ರಿ ಕವಿತಾ ಕವಲಕುಂಟ್ಲ ಅವರೇ ನಿಜಾಮಾಬಾದ್‌ ಕ್ಷೇತ್ರದಲ್ಲಿ ಸೋಲಿನ ರುಚಿ ಉಣಬೇಕಾಯಿತು. ವಿಶೇಷವೆಂದರೆ, ಕವಿತಾರನ್ನು ಸೋಲಿಸಿದ್ದು ಕಾಂಗ್ರೆಸ್‌ನ ಮಾಜಿ ಸಂಸದ ಮಧು ಯಷ್ಕಿ ಗೌಡ್‌ ಅವರಲ್ಲ. ಬದಲಿಗೆ ಬಿಜೆಪಿ ಅಭ್ಯರ್ಥಿ ಅರವಿಂದ ಧರ್ಮಪುರಿ.

ಹಾಗಿದ್ದರೆ ಬಿಜೆಪಿಯ ದಿಢೀರ್‌ ಬೆಳವಣಿಗೆಗೆ ಕಾರಣವೇನು?: ಜಾತ್ಯತೀತ ಮತಗಳು ಟಿಆರ್‌ಎಸ್‌ ಮತ್ತು ಕಾಂಗ್ರೆಸ್‌ ಮಧ್ಯೆ ವಿಭಜನೆಗೊಂಡ ಕಾರಣ, ಹಿಂದೂ ಮತಗಳತ್ತ ಬಿಜೆಪಿ ಗಮನ ಹರಿಸಿತು. ಹಿಂದೂ ಮತಗಳನ್ನು ಕ್ರೋಡೀಕರಿಸುವ ಕೆಲಸಕ್ಕೆ ಕೇಸರಿ ಪಕ್ಷ ಕೈಹಾಕಿತು. ಜತೆಗೆ, ಜನತೆಗೆ ರಾಜ್ಯದಲ್ಲಿ ಟಿಆರ್‌ಎಸ್‌ ಅಗತ್ಯವಿದ್ದರೂ, ಕೇಂದ್ರದಲ್ಲಿ ಸ್ಥಿರ ಸರ್ಕಾರ ಬೇಕೆಂಬ ಹಂಬಲ ಇದ್ದ ಕಾರಣ, ಅದನ್ನು ಬಿಜೆಪಿ ತನ್ನ ಲಾಭಕ್ಕೆ ಬಳಸಿಕೊಂಡಿತು.

ಹಿಂದೂ ಮತಗಳ ಕ್ರೋಡೀಕರಣವು ಬಿಜೆಪಿ ಪಾಲಿಗೆ ಬಲಿಷ್ಠ ಅಡಿಪಾಯವನ್ನು ಹಾಕಿಕೊಟ್ಟಿತು. ಕಾಂಗ್ರೆಸ್‌ನ ಮತಗಳು ಹಾಗೂ ಟಿಆರ್‌ಎಸ್‌ ವಿರೋಧಿ ಮತಗಳು ಬಿಜೆಪಿಯತ್ತ ವಾಲಿದವು. ಅಲ್ಪಸಂಖ್ಯಾತರ ಮತಗಳು ಹೆಚ್ಚಿರುವಂಥ ಕರೀಂನಗರ, ನಿಜಾಮಾಬಾದ್‌, ಸಿಕಂದರಾಬಾದ್‌ ಮತ್ತು ಅದಿಲಾಬಾದ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಲ್ಲಿ ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್‌-ಟಿಆರ್‌ಎಸ್‌ಗೆ ಹಂಚಿಕೆಯಾಗಿದ್ದರೆ, ಹಿಂದೂಗಳ ಮತಗಳನ್ನು ಸೆಳೆಯುವಲ್ಲಿ ಬಿಜೆಪಿ ಸಫ‌ಲವಾಗಿದೆ.

ಗಮನಾರ್ಹ ಸಂಗತಿಯೆಂದರೆ, ಮುಸ್ಲಿಂ ಬಾಹುಳ್ಯದ ಹೈದರಾಬಾದ್‌ನಲ್ಲಿ ಪ್ರಾಬಲ್ಯ ಸಾಧಿಸಿರುವ ಅಸಾದುದ್ದೀನ್‌ ಒವೈಸಿ ಅವರೂ ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳಲು ಹರಸಾಹಸ ಪಟ್ಟಿದ್ದರು. ಎಣಿಕೆಯ ವೇಳೆ ಒಂದು ಹಂತದಲ್ಲಿ ಒವೈಸಿ ಹಿನ್ನಡೆಯನ್ನೂ ಅನುಭವಿಸಿದ್ದರು. ಇಲ್ಲೂ ಒವೈಸಿಗೆ ಪ್ರಬಲ ಪೈಪೋಟಿ ನೀಡಿದ್ದು ಬಿಜೆಪಿಯೇ ವಿನಾ ಕಾಂಗ್ರೆಸ್‌ ಅಲ್ಲ.

ಬಿಜೆಪಿಯ ಈ ಸಾಧನೆಯು ಕಾಂಗ್ರೆಸ್‌ಗೂ ಅತಿದೊಡ್ಡ ಆಘಾತ ನೀಡಿದೆ. ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಯನ್ನು ಗಮನಿಸಿದರೆ, ತಾವೇ ರಚಿಸಿರುವಂಥ ರಾಜ್ಯದಲ್ಲಿ ತಳವೂರಲು ಕಾಂಗ್ರೆಸ್‌ ಹರಸಾಹಸ ಪಡಬೇಕಾಗಿರುವುದು ವಿಪರ್ಯಾಸ. ಅಲ್ಲದೆ, ಇಲ್ಲಿ ಕಾಂಗ್ರೆಸ್‌ಗೆ ಪ್ರಬಲ ನಾಯಕತ್ವದ ಕೊರತೆಯೂ ಇದೆ. ಇದಕ್ಕಿಂತ ಹೆಚ್ಚಾಗಿ ಟಿಡಿಪಿ ಜತೆಗೆ ಮಾಡಿಕೊಂಡ ಮೈತ್ರಿಯೂ ಕಾಂಗ್ರೆಸ್‌ಗೆ ಮುಳುವಾಗಿದ್ದು ಸುಳ್ಳಲ್ಲ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

Untitled-1

ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

Untitled-1

ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ

Downloadable e-version of voter id card to be launched on Monday

ಮತದಾರರ ಕೈ ಸೇರಲಿದೆ ಡಿಜಿಟಲ್ ಓಟರ್ ಕಾರ್ಡ್

mapple

ಐಪೋನ್-12 ಸೇರಿದಂತೆ ಹಲವು ಸ್ಮಾರ್ಟ್ ಪೋನ್ ಗಳಿಗೆ ಭರ್ಜರಿ ಡಿಸ್ಕೌಂಟ್: ಇಲ್ಲಿದೆ ಮಾಹಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Downloadable e-version of voter id card to be launched on Monday

ಮತದಾರರ ಕೈ ಸೇರಲಿದೆ ಡಿಜಿಟಲ್ ಓಟರ್ ಕಾರ್ಡ್

jammu

ಫೇಸ್ ಬುಕ್, ವಾಟ್ಸಾಪ್ ಬದಲಿಗೆ ಹೊಸ ಅಪ್ಲಿಕೇಶನ್ ಬಳಸಲು ಆರಂಭಿಸಿದ ಪಾಕ್ ಉಗ್ರರು

Will make state free from bullets, agitations and floods in five years: Amit Shah in Assam

ಬಿಜೆಪಿ ಇನ್ನೂ 5 ವರ್ಷ ಅಧಿಕಾರಕ್ಕೆ ಬಂದರೇ, ಅಸ್ಸಾಂ ಭದ್ರವಾಗುತ್ತದೆ : ಶಾ

Delhi Police readies routes for Republic Day Kisan tractor rally, asks farmers to cooperate

ರೈತರ ಟ್ರ್ಯಾಕ್ಟರ್ ರ‍್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು

“Tremendous Growth In ‘GDP”’: Rahul Gandhi’s Dig Over Fuel Price Hike

‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆ ಕಂಡಿದೆ : ರಾಹುಲ್ ಟೀಕೆ

MUST WATCH

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

udayavani youtube

ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ

udayavani youtube

ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,

ಹೊಸ ಸೇರ್ಪಡೆ

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

Untitled-1

ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

Untitled-1

ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.