ಪೊಲೀಸ್ ವೇಷಧರಿಸಿ ಮಹಿಳೆಯನ್ನು ಬಸ್ ನಿಂದ ಕೆಳಗಿಳಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ!

ಪೊಲೀಸ್ ತಂಡ ಗಮನಿಸಿದ ಸೋಮ ಚಾರೈ ಮತ್ತು ಬ್ರಹ್ಮ ಚಾರೈ ಕಾರಿನಲ್ಲಿ ಪರಾರಿಯಾಗಿದ್ದರು.

Team Udayavani, Feb 14, 2020, 1:54 PM IST

ಸಂಗಾರೆಡ್ಡಿ(ತೆಲಂಗಾಣ): 32 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಾಮೀಲಾಗಿದ್ದ ಮೂವರು ಆರೋಪಿಗಳನ್ನು ಸೆರೆಹಿಡಿಯಲು ವಾಹನದಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಒಬ್ಬ ಆರೋಪಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಸಿಸಿಟಿವಿ ನೆರವಿನೊಂದಿಗೆ ಮೂವರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ವಿಶೇಷ ಪೊಲೀಸ್ ತಂಡ ಆರೋಪಿ ಬೀದರ್ ನ ಪವನ್ ಕುಮಾರ್ ನನ್ನು ಬಂಧಿಸಿದ್ದರು. ಪೊಲೀಸ್ ತಂಡ ಗಮನಿಸಿದ ಸೋಮ ಚಾರೈ ಮತ್ತು ಬ್ರಹ್ಮ ಚಾರೈ ಕಾರಿನಲ್ಲಿ ಪರಾರಿಯಾಗಿದ್ದರು. ಪೊಲೀಸರು ಕೂಡಾ ವಾಹನದಲ್ಲಿ ಬೆನ್ನಟ್ಟಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಸೋಮ ಚಾರೈ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬ್ರಹ್ಮ ಚಾರೈ ಗಾಯಗೊಂಡಿದ್ದ. ನಂತರ ಇಬ್ಬರು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ ಎಂದು ವರದಿ ತಿಳಿಸಿದೆ.

ಇಬ್ಬರು ಪೊಲೀಸರಂತೆ ವೇಷಧರಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿ ತೆರಳಿ ನಿಷೇಧಿತ ಗುಟ್ಕಾ ಪ್ಯಾಕೇಟ್ ಗಳನ್ನು ಸಾಗಿಸುತ್ತಿರುವುದಾಗಿ ಆರೋಪಿಸಿ ಬಸ್ ನಿಂದ ಕೆಳಗಿಳಿಸಿದ್ದರು. ಮತ್ತೊಬ್ಬ ಆರೋಪಿ ಕಾರಿನಲ್ಲಿ ಬಸ್ ಅನ್ನು ಹಿಂಬಾಸಿ ಬಂದಿದ್ದ. ನಂತರ ಮೂವರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ವರದಿ ತಿಳಿಸಿದೆ.

ಈ ಮಹಿಳೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದು, ನೆರೆಯ ಕರ್ನಾಟಕದ ಬೀದರ್ ಜಿಲ್ಲೆಯಿಂದ ಗುಟ್ಕಾ ಖರೀದಿಸಿ ಬಸ್ ನಲ್ಲಿ ವಾಪಸ್ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಜಹೀರಾಬಾದ್ ನಗರದ ಸಿದ್ದೇಶ್ವರ್ ಸರ್ಕಲ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ