ದೆಹಲಿ :10ನೇ ಮಹಡಿಯಿಂದ ಜಿಗಿದು ಪೊಲೀಸ್‌ ಅಧಿಕಾರಿ ಆತ್ಮಹತ್ಯೆ 

Team Udayavani, Nov 29, 2018, 12:29 PM IST

ಹೊಸದಿಲ್ಲಿ:ರಾಷ್ಟ್ರ ರಾಜಧಾನಿಯಲ್ಲಿರುವ ಪೊಲೀಸ್‌ ಹೆಡ್‌ ಕ್ವಾರ್ಟರ್ಸ್‌ ಕಟ್ಟಡದಲ್ಲಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 55 ರ ಹರೆಯದ ಎಸಿಪಿ ಪ್ರೇಮ್‌ ಬಲ್ಲಾಭ್‌ ಅವರು ಆತ್ಮಹತ್ಯೆ ಮಾಕಿಕೊಂಡ ಅಧಿಕಾರಿ. 

ಕೆಳಕ್ಕೆ ಬಿದ್ದೊಡನೆಯೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಕೊನೆಯುಸಿರೆಳೆದಿದ್ದರು. ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ. 

ಪಿಟಿಐ ವರದಿಯಂತೆ ಬಲ್ಲಾಭ್‌ ಅವರು ಕ್ರೈಂ ಮತ್ತು ಟ್ರಾಫಿಕ್‌ ವಿಭಾಗದ ಅಧಿಕಾರಿಯಾಗಿದ್ದರು. 

2016 ರಲ್ಲಿ ಅವರ ಸೇವೆ ಪರಿಗಣಿಸಿ ಸರ್ಕಾರ ಪೊಲೀಸ್‌ ಪದಕವನ್ನೂ ನೀಡಿತ್ತು ಎಂದು ತಿಳಿದು ಬಂದಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ