ಭಾರತದಲ್ಲಿ ಕಳೆದ 24ಗಂಟೆಯಲ್ಲಿ 10,725 ಕೋವಿಡ್ ಪ್ರಕರಣಗಳ ಪತ್ತೆ, 36 ಮಂದಿ ಸಾವು
ಭಾರತದಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,488ಕ್ಕೆ ತಲುಪಿದೆ.
Team Udayavani, Aug 25, 2022, 12:45 PM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 10,725 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,43,78,920ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 25) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆಯ ಯತ್ನ ವಿಫಲಗೊಳಿಸಿದ ಸೇನೆ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 94,047ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 36 ಮಂದಿ ಸಾವನ್ನಪ್ಪಿದ್ದಾರೆ. ಭಾರತದಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,488ಕ್ಕೆ ತಲುಪಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.60ರಷ್ಟಿದೆ. ಕಳೆದ 24 ಗಂಟೆಯಲ್ಲಿ 2,395 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.