ನಟ ದಿಲೀಪ್ಗಿಲ್ಲ ಜಾಮೀನು: ನಟನ ಬಳಿ ಕಿರುಕುಳ ವಿಡಿಯೋ
Team Udayavani, Jul 16, 2017, 3:30 AM IST
ಕೊಚ್ಚಿ: ಬಹು ಭಾಷಾ ನಟಿಗೆ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಇರುವ ಮೊಬೈಲ್ ಬಂಧಿತ ಚಿತ್ರ ನಟ ದಿಲೀಪ್ ಬಳಿ ಇದೆ ಎಂದು ವಿಶೇಷ ತನಿಖಾ ದಳದ ಪೊಲೀಸರು ಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಜಾಮೀನು ಕೋರಿ ನಟ ಸಲ್ಲಿಸಿದ್ದ ಅರ್ಜಿಗೆ ಶನಿವಾರ ಆಕ್ಷೇಪ ಸಲ್ಲಿಸಿದ ವೇಳೆ ಪೊಲೀಸರು ಈ ಅಂಶ ಪ್ರಸ್ತಾವಿಸಿದ್ದಾರೆ. ಇದೇ ವೇಳೆ ಜಾಮೀನು ಕೋರಿ ದಿಲೀಪ್ ಸಲ್ಲಿಸಿರುವ ಅರ್ಜಿಯನ್ನು ಕೊಚ್ಚಿಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿದೆ.
ನಟನ ವಿರುದ್ಧ ಹೊರಿಸಲಾಗಿರುವ ಆರೋಪಗಳ ಬಗ್ಗೆ ಬಲವಾದ ಸಾಕ್ಷ್ಯಗಳಿವೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದಿಸಿದ್ದಾರೆ. ಜಾಮೀನು ನೀಡಿದರೆ ಅವರು ಸಾಕ್ಷ್ಯಗಳನ್ನು ನಾಶಪಡಿಸಬಹುದು ಹಾಗೂ ತನಿಖೆಗೆ ಅಡ್ಡಿಯುಂಟು ಮಾಡಬಹುದೆಂದು ವಕೀಲರು ಪ್ರತಿಪಾದಿಸಿದರು.
ಈಗಾಗಲೇ ದಿಲೀಪ್ ಬೆಂಬಲಿಗರು ಸಾಮಾಜಿಕ ಜಾಲ ತಾಣಗಳಲ್ಲಿ ಅವರ ಪರವಾಗಿ ಬೆಂಬಲ ವ್ಯಕ್ತಪಡಿಸಿ, ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಇದೇ ವೇಳೆ ದಿಲೀಪ್ ಪರ ವಕೀಲರು ಮೊಹರು ಮಾಡಿದ ಲಕೋಟೆಗಳಲ್ಲಿ ಎರಡು ಮೊಬೈಲ್ ಫೋನ್ಗಳನ್ನು ಕೋರ್ಟ್ಗೆ ಸಲ್ಲಿಸಿ ಅವುಗಳನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ದಿಲೀಪ್ ಪರ ವಕೀಲರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ