ಲೋಕಸಭೆ ಚುನಾವಣೆಯಲ್ಲಿ ನಟ ಪ್ರಕಾಶ್ ರೈ ಸ್ಪರ್ಧೆ
Team Udayavani, Jan 2, 2019, 3:50 AM IST
ಚೆನ್ನೈ: ಬಹುಭಾಷಾ ನಟ ಪ್ರಕಾಶ್ ರೈ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮಾತುಗಳನ್ನಾಡಿದ್ದಾರೆ. ಹೊಸ ವರ್ಷದ ಶುಭಾಶಯ ಕೋರುವ ನಿಟ್ಟಿನಲ್ಲಿ ಮಂಗಳವಾರ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಘೋಷಿಸಿದ್ದಾರೆ.
“ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಒಂದು ಹೊಸ ಆರಂಭಕ್ಕೆ ಮುಂದಾಗುತ್ತಿದ್ದೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಬೆಂಬಲ ಬೇಕು’ ಎಂದು ಬರೆದುಕೊಂಡಿದ್ದಾರೆ. ಈ ಬಗೆಗಿನ ವಿವರಗಳನ್ನು ಶೀಘ್ರವೇ ಪ್ರಕಟಿಸುವುದಾಗಿ ಹೇಳಿಕೊಂಡಿದ್ದಾರೆ. “ಮುಂದಿನ ಬಾರಿ ಸಂಸತ್ನಲ್ಲಿಯೂ ಜನರ ಸರಕಾರ’ ಎಂದೂ ಟ್ವೀಟ್ ಮಾಡಿದ್ದಾರೆ. ಈ ಬೆಳವಣಿಗೆಯಿಂದಾಗಿ ಒಂದು ವರ್ಷದ ಅವಧಿಯಲ್ಲಿ ರಾಜಕೀಯ ಪ್ರವೇಶಿಸಿದ ಬಹುಭಾಷಾ ನಟ ಕಮಲಹಾಸನ್, ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಬಳಿಕ ಪ್ರಕಾಶ್ ರೈ ಮೂರನೇಯ ವರಾಗಿದ್ದಾರೆ.
ಇದೇ ವೇಳೆ ರೈ ನಿರ್ಧಾರಕ್ಕೆ ಟ್ವಿಟರ್ನಲ್ಲಿ ಟಾಂಗ್ ನೀಡಿರುವ ಮಾಜಿ ಸಚಿವ ಸುರೇಶ್ ಕುಮಾರ್ ಚುನಾವಣಾ ಕ್ಷೇತ್ರದಲ್ಲಿ ರೀ ಟೇಕ್, ಎಡಿಟಿಂಗ್ ಇರುವುದಿಲ್ಲ. ಸಿದ್ಧಪಡಿಸಿದ ಸಂಭಾಷಣೆಗೂ ಹೆಚ್ಚು ಅವಕಾಶವಿಲ್ಲ. ಆ್ಯಕ್ಷನ್- ಕಟ್ ಪದವೇ ನಿಷಿದ್ಧ. ಹುಷಾರಾಗಿರಿ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?