ಮುಂಬಯಿ ಪೊಲೀಸ್ ಕಮಿಷನರ್ ಭೇಟಿಯಾದ ನಟ ಸಲ್ಮಾನ್ ಖಾನ್
Team Udayavani, Jul 22, 2022, 7:40 PM IST
ಮುಂಬಯಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಶುಕ್ರವಾರ ದಕ್ಷಿಣ ಮುಂಬಯಿಯಲ್ಲಿರುವ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿ ಮಾಡಿದ್ದಾರೆ.
ಕ್ರಾಫರ್ಡ್ ಮಾರುಕಟ್ಟೆ ಎದುರು ಇರುವ ಮುಂಬಯಿ ಪೊಲೀಸ್ ಪ್ರಧಾನ ಕಚೇರಿಗೆ ಸಂಜೆ 4 ಗಂಟೆ ಸುಮಾರಿಗೆ ತಮ್ಮ ಕಾರಿನಲ್ಲಿ ಆಗಮಿಸಿದ ನಟ, ಫನ್ಸಾಲ್ಕರ್ ಅವರನ್ನು ಭೇಟಿಯಾದರು. ಇದು ಕೇವಲ ಸೌಜನ್ಯದ ಭೇಟಿಯಾಗಿದೆ ಮತ್ತು ಯಾವುದೇ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಲ್ಮಾನ್ ಖಾನ್ ಅಲ್ಲಿ ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ವಿಶ್ವಾಸ್ ನಂಗ್ರೆ ಪಾಟೀಲ್ ಅವರನ್ನು ಭೇಟಿಯಾದರು.
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯ ಬಳಿಕ ಕಳೆದ ತಿಂಗಳು, ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಇಬ್ಬರೂ ಬೆದರಿಕೆ ಪತ್ರವನ್ನು ಸ್ವೀಕರಿಸಿದ್ದರು. ನಂತರ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ