2019ರ ಬಳಿಕ ಮೋದಿ ನೇತೃತ್ವದಲ್ಲಿ ನೀತಿ ಆಯೋಗ ಸಭೆ
Team Udayavani, Aug 5, 2022, 8:19 PM IST
ನವದೆಹಲಿ: ನೀತಿ ಆಯೋಗದ ಆಡಳಿತ ಮಂಡಳಿಯ 7ನೇ ಸಭೆ ಭಾನುವಾರ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಪ್ರಧಾನಿ ಅವರ ಕಚೇರಿ ತಿಳಿಸಿದೆ.
2019ರ ಜುಲೈ ನಂತರ ಇದೇ ಮೊದಲನೇ ಬಾರಿಗೆ ಭೌತಿಕವಾಗಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯುತ್ತಿದೆ.
ಬೆಳೆಗಳಲ್ಲಿ ವೈವಿಧ್ಯೀಕರಣ, ಕೃಷಿ ಕ್ಷೇತ್ರದಲ್ಲಿ ಸ್ವಾವಲಂಭನೆ ರಾಷ್ಟ್ರೀಯ ಶಿಕ್ಷಣ ನೀತಿ ಸೇರಿ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಸಭೆ ನಡೆಯಲಿದ್ದು, ಅದರಲ್ಲಿ ಎಲ್ಲ ರಾಜ್ಯಗಳು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಕೊರಟಗೆರೆ: ಕೊಚ್ಚಿ ಹೋದ ವೃದ್ದೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ