ನಂದಿಗ್ರಾಮದಲ್ಲಿ ಸೋತ ಮಮತಾ ಬ್ಯಾನರ್ಜಿ ಮತ್ತೆ ಭವಾನಿಪುರ್ ಕ್ಷೇತ್ರದಿಂದ ಸ್ಪರ್ಧೆ
ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಭವಾನಿಪುರ್ ನಿಂದ ಎರಡು ಬಾರಿ ಆಯ್ಕೆಯಾಗಿದ್ದರು.
Team Udayavani, May 21, 2021, 5:02 PM IST
ಕೋಲ್ಕತಾ:ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿ ಪರಾಜಯಗೊಂಡಿದ್ದ ಪಶ್ಚಿಮಬಂಗಾಳ ಮುಖ್ಯಮಂತ್ರಿ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತೆ ತಮ್ಮ ಹಿಂದಿನ ಕ್ಷೇತ್ರವಾದ ಭವಾನಿಪುರ್ ನಲ್ಲಿ ಸ್ಪರ್ಧಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಭವಾನಿಪುರ್ ನಿಂದ ಸ್ಪರ್ಧಿಸಿ ಜಯಗಳಿಸಿರುವ ಟಿಎಂಸಿ ಶಾಸಕ ಸೋಭನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ (ಮೇ 21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿಎಂ ಬ್ಯಾನರ್ಜಿಗೆ ಸ್ಪರ್ಧಿಸಲು ಅನುವು ಮಾಡಿಕೊಟ್ಟಿರುವುದಾಗಿ ವರದಿ ವಿವರಿಸಿದೆ.
ಚಟ್ಟೋಪಾಧ್ಯಾಯ ಪಶ್ಚಿಮಬಂಗಾಳ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾಗಿ ಮುಂದುವರಿಯಲು ಮಮತಾ ಬ್ಯಾನರ್ಜಿ ಅವರು ಮುಂದಿನ ಆರು ತಿಂಗಳೊಳಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಬೇಕಾಗಿದೆ.
ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಭವಾನಿಪುರ್ ನಿಂದ ಎರಡು ಬಾರಿ ಆಯ್ಕೆಯಾಗಿದ್ದರು. ಪಕ್ಷದ ಎಲ್ಲಾ ಮುಖಂಡರು ಈ ಕುರಿತು ಚರ್ಚಿಸಿದ್ದು, ಬ್ಯಾನರ್ಜಿ ಅವರು ಭವಾನಿಪುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಷಯ ಕೇಳಿದ್ದು, ಈ ಹಿನ್ನೆಲೆಯಲ್ಲಿ ನನ್ನ ಸ್ಥಾನವನ್ನು ಬಿಟ್ಟುಕೊಡಲು ನಿರ್ಧರಿಸಿದ್ದೇನೆ, ಇದರಲ್ಲಿ ಯಾವುದೇ ಒತ್ತಡವಿಲ್ಲ ಎಂದು ಚಟ್ಟೋಪಾಧ್ಯಾಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು