ಮತ್ತೆ ಸಿಧು ಪಾಕ್‌ ವಿವಾದ

Team Udayavani, Oct 14, 2018, 6:00 AM IST

22.jpg

ಹೊಸದಿಲ್ಲಿ: ಪಾಕ್‌ ಮೇಲೆ ತಮಗಿರುವ ಪ್ರೀತಿ ವ್ಯಕ್ತಪಡಿಸುವ ಭರದಲ್ಲಿ ದಕ್ಷಿಣ ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪಂಜಾಬ್‌ ಸಚಿವ ನವಜೋತ್‌ ಸಿಂಗ್‌ ಸಿಧು ಹೊಸ ವಿವಾದ ಸೃಷ್ಟಿಸಿದ್ದಾರೆ. ದಕ್ಷಿಣ ಭಾರತಕ್ಕೆ ಹೋಗುವುದಕ್ಕಿಂತ ಪಾಕಿಸ್ಥಾನಕ್ಕೆ ಹೋಗುವುದೇ ಉತ್ತಮ ಎಂಬ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದಿದ್ದು, ದಕ್ಷಿಣ ಭಾರತ ವರ್ಸಸ್‌ ಉತ್ತರ ಭಾರತ ಎಂಬ ಜಗಳವನ್ನು ಹುಟ್ಟುಹಾಕಲಿದೆಯೇ ಎಂಬ ಅನುಮಾನ ಮೂಡಿದೆ. 

ಶನಿವಾರ ಹಿಮಾಚಲಪ್ರದೇಶದಲ್ಲಿ ನಡೆದ ಕಸೌಲಿ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಸಿಧು, ದಕ್ಷಿಣ ಭಾರತದಲ್ಲಿ ಭಾಷೆ ಹಾಗೂ ಆಹಾರದ್ದೇ ದೊಡ್ಡ ಸಮಸ್ಯೆ. ಅಲ್ಲಿಗೆ ಹೋದರೆ ಅಲ್ಲಿನ ಒಂದು ಪದವೂ ನನಗೆ ಅರ್ಥವಾಗುವುದಿಲ್ಲ. ಇಡ್ಲಿಯಂಥ ಆಹಾರವನ್ನು ಸ್ವಲ್ಪಮಟ್ಟಿಗೆ ಸೇವಿಸುತ್ತೇನೆ. ಆದರೆ ಹೆಚ್ಚು ದಿನ ಅದನ್ನೇ ತಿನ್ನುತ್ತಿರಲು ನನ್ನಿಂದ ಸಾಧ್ಯವಿಲ್ಲ. ಅಲ್ಲಿನ ಸಂಸ್ಕೃತಿ ಸಂಪೂರ್ಣ ಭಿನ್ನ. ಆದರೆ ಪಾಕಿಸ್ಥಾನಕ್ಕೆ ಹೋದರೆ ಅಲ್ಲಿನ ಜನ ಪಂಜಾಬಿ ಮತ್ತು ಇಂಗ್ಲಿಷ್‌ ಭಾಷೆ ಮಾತನಾಡುತ್ತಾರೆ. ಅವರೊಂದಿಗೆ ಬೆರೆಯುವುದೂ ನನಗೆ ತುಂಬಾ ಸುಲಭ. ಅಲ್ಲಿ ಸಂಚರಿಸುವುದೇ ಒಂದು ಅದ್ಭುತ ಅನುಭವ. ಹೀಗಾಗಿ ದಕ್ಷಿಣ ಭಾರತಕ್ಕಿಂತ ಪಾಕಿಸ್ಥಾನಕ್ಕೆ ಹೋಗುವುದು ನನಗೆ ಹೆಚ್ಚು ಸೂಕ್ತವೆನಿಸುತ್ತದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಪಾಕ್‌ ಸೇನಾ ಮುಖ್ಯಸ್ಥ ಖಮರ್‌ ಜಾವೇಜ್‌ ಬಜ್ವಾರನ್ನು ಆಲಿಂಗಿಸಿದ್ದನ್ನೂ ಸಮರ್ಥಿಸಿಕೊಂಡಿದ್ದಾರೆ.

ಪಾಕ್‌ಗೆ ಹೋಗಲಿ ಸಿಧು ಅವರ “ದಕ್ಷಿಣ ಭಾರತ – ಪಾಕಿಸ್ಥಾನ’ ಹೇಳಿಕೆಗೆ ವಿವಿಧ ರಾಜಕೀಯ ಪಕ್ಷಗಳು ಕಿಡಿಕಾರಿವೆ. ಸಿಧು ಅವರು ಈಗ ಪಾಕಿಸ್ಥಾನಿ ಸಮರ್ಥಕರಾಗಿ ಬದಲಾಗಿದ್ದಾರೆ ಎಂದು ಪಂಜಾಬ್‌ನ ಅಕಾಲಿ ದಳದ ಹಿರಿಯ ನಾಯಕರೊಬ್ಬರು ತಿವಿದಿದ್ದಾರೆ. ತಮಿಳುನಾಡಿನ ಎಐಎಡಿಎಂಕೆ ನಾಯಕರೊಬ್ಬರು ಮಾತನಾಡಿ, ದ.ಭಾರತಕ್ಕಿಂತ ಪಾಕಿಸ್ಥಾನವೇ ಇಷ್ಟವೆಂದಾದರೆ ಅಲ್ಲಿಗೇ ಹೋಗಲಿ ಎಂದಿದ್ದಾರೆ. ಸಿಧು ಪಾಕ್‌ ಪ್ರೀತಿ ಬಗ್ಗೆ ಪ್ರಶ್ನೆ ಮಾಡಿದ ಬಿಜೆಪಿ, ಅವರ ಹೇಳಿಕೆ ಆಕ್ಷೇಪಾರ್ಹ ಎಂದಿದೆ. 

ಪಾಕ್‌ನೊಂದಿಗೆ ದ. ಭಾರತವನ್ನು ಹೋಲಿಕೆ ಮಾಡುವುದು ಸರಿಯಲ್ಲ; ಮಾತ್ರವಲ್ಲ ಅದು ಖಂಡನಾರ್ಹ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ನಳಿನ್‌ ಕೊಹ್ಲಿ ಹೇಳಿದ್ದಾರೆ. ಇದರಲ್ಲೇನೂ ವಿಶೇಷವಿಲ್ಲ. ಸುದ್ದಿಯಲ್ಲಿರಬೇಕೆಂದು ಸಿಧು ಹೀಗೆಲ್ಲ ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಇನ್ನು ಕಾಂಗ್ರೆಸ್‌ ವಿವಾದವನ್ನು ತೇಲಿಬಿಡುವ ಯತ್ನಕ್ಕೆ ಕೈಹಾಕಿದೆ.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು

ಗುಣಮಟ್ಟದ ಉನ್ನತ ಶಿಕ್ಷಣವು ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ವಿಶಿಷ್ಟ ಲಕ್ಷಣ-ಉಪರಾಷ್ಟ್ರಪತಿ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.