ದಂಡ ಕಟ್ಟಲಾಗದೇ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ
Team Udayavani, Sep 29, 2019, 5:00 AM IST
ಸಾಂದರ್ಭಿಕ ಚಿತ್ರ
ಅಹಮದಾಬಾದ್: ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ಬಳಿಕ ಸಂಚಾರಿ ಪೊಲೀಸರು ಭಾರಿ ಮೊತ್ತದ ದಂಡ ವಿಧಿಸುತ್ತಿರುವುದು ಸುದ್ದಿಯಾಗುತ್ತಲೇ ಇದೆ. ಶನಿವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ಆಟೋ ರಿಕ್ಷಾ ಚಾಲಕರೊಬ್ಬರಿಗೆ 18,000 ದಂಡ ವಿಧಿಸಲಾಗಿತ್ತು. ದಂಡ ಪಾವತಿಸಲು ಸಾಧ್ಯವಾಗದೇ ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಾಲಕ ರಾಜು ಸೋಲಂಕಿ ಇಷ್ಟು ದೊಡ್ಡ ಮೊತ್ತದ ದಂಡ ಕಟ್ಟಲು ಹಣವಿಲ್ಲ ಎಂದಿದ್ದಕ್ಕೆ ಪೊಲೀ ಸರು ಅವರ ರಿಕ್ಷಾವನ್ನು ಜಪ್ತಿ ಮಾಡಿದ್ದಾರೆ. ನನ್ನ ಆಟೋ ಜಪ್ತಿಯಾಗಿದೆ. ನನಗೆ ಕೆಲಸಕ್ಕೆ ಹೋಗಲೂ ಸಾಧ್ಯವಿಲ್ಲ, ಹೀಗಾಗಿ ಈ ನಿರ್ಧಾರಕ್ಕೆ ಬಂದೆ ಎಂದು ಅವರು ಹೇಳಿದ್ದಾರೆ. ರಾಜು ಬಿ.ಕಾಂ ಪದವೀಧರ, ಉದ್ಯೋಗ ಸಿಗದ ಕಾರಣ ರಿಕ್ಷಾ ಚಲಾಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ
ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ
ವಸುಂಧರಾ ಇಲ್ಲದೆ ನಡೆಯಲಿದೆ ಚುನಾವಣೆ? ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದೆನು?
ಮಳೆಗೆ ಬಳಲಿದ ಅಸ್ಸಾಂ; ನಿಲ್ಲದ ಪ್ರವಾಹ ಪ್ರಕೋಪ; ರಕ್ಷಣಾ ಕಾರ್ಯ
ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್ ಸಂಗ್ಮಾ