ಆಪ್ ಸಿಎಂ ಅಭ್ಯರ್ಥಿ ಅಜಯ್ ಕೊಟಿಯಾಲ್ ಬಿಜೆಪಿಗೆ!
Team Udayavani, May 25, 2022, 1:16 AM IST
ಡೆಹ್ರಾಡೂನ್: ಉತ್ತರಾಖಂಡದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಜಯ್ ಕೊಟಿಯಾಲ್ ಮಂಗಳವಾರ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಸಮ್ಮುಖದಲ್ಲಿ ಅವರು ಪಕ್ಷ ಸೇರಿದ್ದಾರೆ. ಫೆಬ್ರವರಿಯಲ್ಲಿ ನಡೆದ ಚುನಾವಣೆಯಲ್ಲಿ ಎಎಪಿ ಪರ ಕಣಕ್ಕಿಳಿದಿದ್ದ ಅವರು ದೊಡ್ಡ ಪ್ರಮಾಣದಲ್ಲಿ ಸೋತು ಠೇವಣಿಯನ್ನೂ ಕಳೆದುಕೊಂಡಿದ್ದರು.
ಎಎಪಿಯಲ್ಲಿ ತಮ್ಮನ್ನು ಗೌರವದಿಂದ ಕಾಣುತ್ತಿಲ್ಲ ಎಂದು ದೂರಿದ್ದ ಅವರು ಮೇ 18ರಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು.