ಶಿವಲಿಂಗದ ಕಾರ್ಬನ್ ಡೇಟಿಂಗ್ಗೆ ಅಲಹಾಬಾದ್ ಹೈಕೋರ್ಟ್ ಅಸ್ತು
Team Udayavani, May 13, 2023, 7:50 AM IST
ಪ್ರಯಾಗ್ರಾಜ್: ವಾರಾಣಸಿಯ ಜ್ಞಾನ ವಾಪಿ ಮಸೀದಿಯೊಳಗಿನ ಶಿವಲಿಂಗದಂತಹ ರಚನೆಯು ಎಷ್ಟು ವರ್ಷ ಹಳೆಯದು ಎಂಬುದನ್ನು ಆಧುನಿಕ ತಂತ್ರಜ್ಞಾನ ಬಳಸಿ ನಿರ್ಧರಿಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಅಧಿಕಾರಿಗಳಿಗೆ ಆದೇಶ ನೀಡಿದೆ.
ಶಿವಲಿಂಗದಂತಹ ರಚನೆಯ ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ಪರಿಶೀ ಲನೆಯ ಮನವಿಯನ್ನು ತಿರಸ್ಕರಿಸಿ ವಾರಾಣಸಿ ಜಿಲ್ಲಾ ನ್ಯಾಯಾಲಯ ಅ.14ರಂದು ನೀಡಿದ್ದ ಆದೇಶವನ್ನು ಶುಕ್ರವಾರ ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದೆ. ಶಿವಲಿಂಗದಂತಹ ರಚನೆಗೆ ಯಾವುದೇ ಹಾನಿಯಾಗದಂತೆ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಇದೇ ವೇಳೆ ಹೈಕೋರ್ಟ್ ನಿರ್ದೇಶಿಸಿದೆ.
ಮಸೀದಿಯ ಆಡಳಿತ ಮಂಡಳಿ ಹೇಳುವ ಪ್ರಕಾರ ಇದು “ವಝೂ ಖಾನಾ’ದಲ್ಲಿನ ಕಾರಂಜಿಯ ಭಾಗವಾಗಿದೆ. ಅಲ್ಲಿ ನಮಾಜ್ಗೆ ಮೊದಲು ಶುದ್ಧೀಕರಣ ಮಾಡಿಕೊಳ್ಳಲಾಗುತ್ತದೆ. ವಾರಾಣಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ನ್ಯಾ| ಅರವಿಂದ್ ಕುಮಾರ್ ಪುರಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ