ನಿಂತಿದ್ದ ಲಾರಿಗೆ ಅಂಬುಲೆನ್ಸ್ ಢಿಕ್ಕಿ: ನಾಲ್ವರ ದಾರುಣ ಸಾವು
Team Udayavani, Nov 18, 2018, 10:52 AM IST
ಬೆಂಗಳೂರು: ಆನೇಕಲ್‌ನ ಗಡಿ ಭಾಗವಾಗಿರುವ ಹೊಸೂರಿನ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಭಾನುವಾರ ನಸುಕಿನ ವೇಳೆ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಢಿಕ್ಕಿಯಾಗಿ ಎಚ್1ಎನ್1 ರೋಗಿ ಸೇರಿ ನಾಲ್ವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಿರುಚ್ಚಿಯಿಂದ ಎಚ್1ಎನ್1 ನಿಂದ ಬಳಲುತ್ತಿದ್ದ ಮದನ್ ಎನ್ನುವವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆ ತರುವಾಗ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರೋಗಿ ಮದನ್,ಚಾಲಕ ಜಯ ಸೂರ್ಯ ಸೇರಿ ಅಂಬುಲೆನ್ಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಹೊಸೂರು ಹುಡ್ಕೋ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಶವಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿರಿಸಿದ್ದಾರೆ.
ಮೃತರ ಪೈಕಿ ಇಬ್ಬರು ರೋಗಿಯ ಮನೆಯವರಾಗಿದ್ದು ಅವರ ಹೆಸರುಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ