ಗೃಹ ಸಚಿವರು ದೇಶವನ್ನು ಮುನ್ನಡೆಸುತ್ತಿದ್ದಾರೋ ಅಥವಾ.. : ಅಮಿತ್ ಶಾ ವಿರುದ್ಧ ಮಮತಾ ವಾಗ್ಬಾಣ

ಬಿಜೆಪಿ ನನ್ನನ್ನು ಕೊಲ್ಲಲು ಸಂಚು ರೂಪಿಸುತ್ತಿದೆಯೇ..? : ಮಮತಾ ಪ್ರಶ್ನೆ

Team Udayavani, Mar 16, 2021, 6:15 PM IST

“Amit Shah Getting Frustrated…”: Mamata Banerjee’s Allegation In Bankura

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಮೇಲಿನ ತಮ್ಮ ವಾಗ್ದಾಳಿಯನ್ನು ಮತ್ತೆ ಮುಂದುವರಿಸಿದ್ದಾರೆ. ಬಂಕುರಾ ಜಿಲ್ಲೆಯ ಮೆಜಿಯಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಮಮತಾ ಮತ್ತೆ ಬಿಜೆಪಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ಚುನಾವಣಾ ಆಯೋಗ ತನ್ನ ಭದ್ರತಾ ಉಸ್ತುವಾರಿಯನ್ನು ತೆಗೆದು ಹಾಕುವ  ಉದ್ದೇಶ ನನ್ನನ್ನು ಕೊಲ್ಲುವ ಹಿಂದಿನ ಪಿತೂರಿಯೇ..? ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಓದಿ : ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಸಲಹೆಗಾರ ಪಿ. ಕೆ ಸಿನ್ಹಾ ರಾಜಿನಾಮೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡ ತರಾಟೆಗೆ ತೆಗದುಕೊಂಡ ಬ್ಯಾನರ್ಜಿ, ಗೃಹ ಸಚಿವರು ದೇಶವನ್ನು ಮುನ್ನಡೆಸುತ್ತಿದ್ದಾರೋ ಅಥವಾ ಬಂಗಾಳದಲ್ಲಿ ನಮ್ಮ ವಿರುದ್ಧ ಪಿತೂರಿ ಮಾಡುತ್ತಿದ್ದಾರೋ ? ಚುನಾವಣಾ ಆಯೋಗ ನನ್ನ ಭದ್ರತಾ ಉಸ್ತುವಾರಿಯನ್ನು ತೆಗದು ಹಾಕಿದೆ. ಬಿಜೆಪಿ ನನ್ನನ್ನು ಕೊಲ್ಲಲು ಸಂಚು ರೂಪಿಸುತ್ತಿದೆಯೇ..? ಎಂದು ಕೇಳಿದ್ದಾರೆ.

ಅವರ ಮತ ಪ್ರಚಾರ ಸಭೆಗಳಲ್ಲಿ ಕಡಿಮೆ ಸ್ಪಂದನೆ ದೊರಕಿರುವುದರಿಂದ ಅಮಿತ್ ಶಾ ನಿರಾಶೆಗೊಂಡಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಜಾರ್ಗ್ರಾಮ್ ಜಿಲ್ಲೆಯಲ್ಲಿ ನಿನ್ನೆ(ಸೋಮವಾರ, ಮಾ.15) ಶಾ ಅವರ ಮತ ಪ್ರಚಾರ ಸಭೆ ರದ್ದುಗೊಳಿಸಲಾಗಿದ್ದು ತಾಂತ್ರಿಕ ಸಮಸ್ಯೆಯಿಂದಲ್ಲ, ಅದು ಕಡಿಮೆ ಜನರ ಸ್ಪಂದನೆಯಿಂದ ರದ್ದುಗೊಂಡಿದ್ದು ಎಂದು ಸಹ ಹೇಳಿದ್ದಾರೆ.

ಇನ್ನು, ಅಮಿತ್ ಶಾ, ದೇಶವನ್ನು ಮುನ್ನೆಡೆಸುವ ಬದಲಾಗಿ ಕೋಲ್ಕತ್ತಾದಲ್ಲಿ ಕುಳಿತು ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಅವರಿಗೆ ಏನು ಬೇಕಾಗಿದೆ..? ನನ್ನನ್ನು ಕೊಲ್ಲಲು ಬಯಸುತ್ತಿದ್ದಾರಾ..? ನನ್ನನ್ನು ಕೊಲ್ಲುವುದರ ಮೂಲಕ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಭಾವಿಸಿದ್ದಾರಾ..? ಎಂದು ಅವರು ಶಾ ವಿರುದ್ಧ ಕಿಡಿ ಕಾರಿದ್ದಾರೆ.

ಚುನಾವಣಾ ಆಯೋಗ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಂಡಿದೆಯೇ,,? ಚುನಾವಣಾ ಆಯೋಗವನ್ನು ಅಮಿತ್ ಶಾ ನಡೆಸುತ್ತಿದ್ದಾರಾ..? ಚುನಾವಣಾ ಆಯೊಗಕ್ಕೆ ಶಾ ಆದೇಶ ನಿಡುತ್ತಿದ್ದಾರೆ. ಚುನಾವಣಾ ಆಯೋಗದ ಸ್ವಾತಂತ್ರ್ಯಕ್ಕೆ ಏನಾಗಿದೆ..? ಶಾ ಸೂಚನೆಯ ಮೇರೆಗೆ ನನ್ನ ಭದ್ರತಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಯಿತು ಎಂದು ಮಮತಾ ಕಟುವಾಗಿ ನುಡಿದಿದ್ದಾರೆ.

ಕಳೆದ ವಾರ ನಂದಿಗ್ರಾಮ್ನಲ್ಲಿ ಮುಖ್ಯಮಂತ್ರಿ ಗಾಯಗೊಂಡ ನಂತರ ಮುಖ್ಯಮಂತ್ರಿಯ ಭದ್ರತಾ ಉಸ್ತುವಾರಿ ವಿವೇಕ್ ಸಹಯ್ ಅವರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ Z ಪ್ಲಸ್ ಭದ್ರತಾ ಪ್ರೋಟೋಕಾಲ್ ಉಲ್ಲಂಘನೆಗೆ ಸಹಯ್ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ ಎಂದು ಆಯೋಗ ಹೇಳಿತ್ತು.

ಓದಿ :  ರಾಜ್ಯದ ಉಪಚುನಾವಣೆಗೆ ದಿನಾಂಕ ಘೋಷಣೆ; ಏಪ್ರಿಲ್ 17ಕ್ಕೆ ಮತದಾನ, ಮೇ 2ಕ್ಕೆ ಫಲಿತಾಂಶ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.