ಮುಂದಿನ ಜ.1ರಂದು ರಾಮಮಂದಿರ ಲೋಕಾರ್ಪಣೆ
ಕೇಂದ್ರ ಸಚಿವ ಅಮಿತ್ ಶಾರಿಂದ ಉದ್ಘಾಟನೆ ದಿನಾಂಕ ಘೋಷಣೆ
Team Udayavani, Jan 6, 2023, 7:20 AM IST
ನವದೆಹಲಿ:ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ನೋಡುವ ಕೋಟ್ಯಂತರ ಭಾರತೀಯರ ಕನಸು ಸಾಕಾರಗೊಳ್ಳಲು ಇನ್ನೊಂದು ವರ್ಷ ಕಾದರೆ ಸಾಕು!
ಹೌದು, ರಾಮಮಂದಿರ ಲೋಕಾರ್ಪಣೆಗೊಳ್ಳುವ ದಿನಾಂಕ ನಿಗದಿಯಾಗಿದೆ. 2024ರ ಜನವರಿ 1ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಸದ್ಯದಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿರುವ ತ್ರಿಪುರದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿ ಗುರುವಾರ ಮಾತನಾಡಿದ ಸಚಿವ ಶಾ, “ರಾಮಮಂದಿರ ನಿರ್ಮಾಣಕ್ಕೆ ಕೋರ್ಟ್ನಲ್ಲಿ ಕಾಂಗ್ರೆಸ್ ಅಡ್ಡಿಪಡಿಸಿತು. ಆದರೆ, ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದ ಕೂಡಲೇ, ಪ್ರಧಾನಿ ನರೇಂದ್ರ ಮೋದಿಯವರು ಮಂದಿರ ನಿರ್ಮಾಣದ ಕಾರ್ಯ ಆರಂಭಿಸಿದರು.
ಈಗ ಎಲ್ಲರೂ ಕೇಳಿಸಿಕೊಳ್ಳಿ- 2024ರ ಜನವರಿ 1ರಂದು ಬೃಹತ್ ಹಾಗೂ ಭವ್ಯವಾದ ರಾಮಮಂದಿರ ಲೋಕಾರ್ಪಣೆಯಾಗಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ