ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ: ಜ.30 ರಂದು ಅಮಿತ್ ಶಾ ಗೋವಾ ಭೇಟಿ
Team Udayavani, Jan 24, 2022, 4:40 PM IST
ಪಣಜಿ: ಬಿಜೆಪಿ ಗೋವಾ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಭಾರಿ ಕಸರತ್ತು ನಡೆಸಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಬಿಜೆಪಿ ರಾಷ್ಟ್ರೀಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 30 ರಂದು ಗೋವಾಕ್ಕೆ ಆಗಮಿಸಲಿದ್ದಾರೆ.
ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಗೋವಾ ಭೇಟಿಯಿಂದ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣಾ ಆಯೋಗ ಹೊರಡಿಸಿರುವ ಎಲ್ಲ ನಿಯಮಗಳಿಗೆ ಬದ್ಧವಾಗಿ ಜನವರಿ 28 ರಿಂದ ಪ್ರಧಾನಿ ಮೋದಿ,ಶಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಪಕ್ಷದ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಾನಾವಡೆ ಮಾಹಿತಿ ನೀಡಿದರು.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ಗೋವಾ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್, ಸಹ ಉಸ್ತುವಾರಿ ಕಿಶನ್ ರೆಡ್ಡಿ, ರವರು ರಾಜ್ಯದಲ್ಲಿ ಪಕ್ಷದ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ