ಬಿಜೆಪಿ ಹಿರಿಯ ನಾಯಕ ಆಡ್ವಾಣಿ ನಿವಾಸಕ್ಕೆ ಶಾ ಭೇಟಿ
Team Udayavani, Jul 23, 2020, 8:53 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ(92) ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. 1992ರ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಇದೇ ಶುಕ್ರವಾರ ವಿಶೇಷ ಸಿಬಿಐ ಕೋರ್ಟ್ ವೀಡಿಯೋ ಲಿಂಕ್ ಮೂಲಕ ಆಡ್ವಾಣಿ ಅವರ ಹೇಳಿಕೆಯನ್ನು ದಾಖಲಿಸಿ ಕೊಳ್ಳಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಸರಕಾರಿ ವಕೀಲರ ಗುಂಪಿನೊಂದಿಗೆ ಆಡ್ವಾಣಿ ನಿವಾಸಕ್ಕೆ ಆಗಮಿಸಿದ ಅಮಿತ್ ಶಾ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ದಿನಂಪ್ರತಿ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಆಗಸ್ಟ್ 31ರೊಳಗಾಗಿ ತೀರ್ಪು ನೀಡುವ ಸಾಧ್ಯತೆಯಿದೆ. ಇದೇ ವೇಳೆ, ಸದ್ಯದಲ್ಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಿರುವ ಹಿನ್ನೆಲೆಯಲ್ಲೂ ಶಾ-ಆಡ್ವಾಣಿ ಭೇಟಿ ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು