ಪೌರತ್ವ ಕಾಯ್ದೆ; ಹಾಸ್ಟೆಲ್ ನಲ್ಲಿದ್ದ ಅಲಿಗಢ್ ವಿವಿ ವಿದ್ಯಾರ್ಥಿಗಳ ತೆರವು,ಮನೆಗಳಿಗೆ ರವಾನೆ

ಮುಸ್ಲಿಮ್ ಯೂನಿರ್ವಸಿಟಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು

Team Udayavani, Dec 16, 2019, 10:28 AM IST

ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ದಿಲ್ಲಿಯ ಜಾಮೀಯಾ ಮಿಲ್ಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕ್ರಮವನ್ನು ಖಂಡಿಸಿ ಅಲಿಗಢ್ ಮುಸ್ಲಿಮ್ ಯೂನಿರ್ವಸಿಟಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಡೆಯಲು ಎಎಂಯು ವಿದ್ಯಾರ್ಥಿಗಳನ್ನು ಕ್ಯಾಂಪಸ್ ನಿಂದ ಖಾಲಿ ಮಾಡಿಸಿ ಮನೆಗಳಿಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಅಲಿಗಢ್ ಮುಸ್ಲಿಮ್ ಯೂನಿರ್ವಸಿಟಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ನಾವು ಕಾಲೇಜ್ ಕ್ಯಾಂಪಸ್ ನಿಂದ ವಿದ್ಯಾರ್ಥಿಗಳನ್ನು ತೆರವುಗೊಳಿಸಿದ್ದು, ಎಲ್ಲರನ್ನು ಮನೆಗೆ ಕಳುಹಿಸಲಾಗಿದೆ ಎಂದು ಉತ್ತರಪ್ರದೇಶ ಪೊಲೀಸ್ ಮಹಾನಿರ್ದೇಶಕ ಒಪಿ ಸಿಂಗ್ ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಹತ್ತು ಮಂದಿ ಪೊಲೀಸರು ಹಾಗೂ 30 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಿಂದ ತೆರವುಗೊಳಿಸುವಂತೆ ಪೊಲೀಸರು ಆಗ್ರಹಿಸಿದ್ದರು. ಸುಮಾರು ಹದಿನೈದು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಅವರನ್ನೆಲ್ಲಾ ಗುರುತಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಸಿಂಗ್ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ