ಉತ್ತರ ಪ್ರದೇಶಕ್ಕೆ ಆನಂದಿ ಬೆನ್‌ ಗವರ್ನರ್‌

Team Udayavani, Jul 21, 2019, 5:51 AM IST

ಹೊಸದಿಲ್ಲಿ:ಹಲವು ರಾಜ್ಯಗಳ ರಾಜ್ಯಪಾಲರನ್ನು ವರ್ಗಾವಣೆ ಮಾಡುವುದರ ಜೊತೆಗೆ ಕೆಲವು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಶನಿವಾರ ಆದೇಶ ಹೊರಡಿಸಿದೆ. ಈ ಪೈಕಿ ಮಧ್ಯಪ್ರದೇಶ ರಾಜ್ಯಪಾಲರಾಗಿದ್ದ ಗುಜರಾತ್‌ ಮಾಜಿ ಸಿಎಂ ಆನಂದಿಬೆನ್‌ ಪಟೇಲ್ರನ್ನು ಉತ್ತರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ. ಪಶ್ಚಿಮ ಬಂಗಾಲದಲ್ಲಿ ಕೇಸರಿನಾಥ್‌ ತ್ರಿಪಾಠಿ ಸ್ಥಾನದಲ್ಲಿ ಸುಪ್ರೀಂಕೋರ್ಟ್‌ ಹಿರಿಯ ನ್ಯಾಯವಾದಿ ಜಗದೀಪ್‌ ಧನ್‌ಕರ್‌ ಅವರನ್ನು ನೇಮಕ ಮಾಡಲಾಗಿದೆ. 1990-91ರಲ್ಲಿ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಕೇಂದ್ರ ಸಚಿವರೂ ಆಗಿದ್ದ ಧನ್‌ಕರ್‌, 2003ರಲ್ಲಿ ಬಿಜೆಪಿ ಸೇರಿದ್ದರು.

ತ್ರಿಪುರಾಗೆ ಕಪ್ತಾನ್‌ ಸಿಂಗ್‌ ಸೋಲಂಕಿ ಸ್ಥಾನದಲ್ಲಿ ಬಿಜೆಪಿ ಮುಖಂಡ ರಮೇಶ್‌ ಬೈಸ್‌ರನ್ನು ನೇಮಕ ಮಾಡಲಾಗಿದೆ. ಬಿಹಾರದ ರಾಜ್ಯಪಾಲರಾಗಿದ್ದ ಲಾಲ್ಜಿ ಟಂಡನ್‌ರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ. ಬಿಹಾರಕ್ಕೆ ಪ್ರಭು ಚೌಹಾಣ್‌ ಮತ್ತು ನಾಗಾಲ್ಯಾಂಡ್‌ಗೆ ಆರ್‌ ಎನ್‌ ರವಿ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಉತ್ತರ ಪ್ರದೇಶಕ್ಕೆ 1950ರ ನಂತರ ಇದೇ ಮೊದಲ ಬಾರಿಗೆ ಮಹಿಳಾ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ಈ ಹಿಂದೆ 1947ರಲ್ಲಿ ಸರೋಜಿನಿ ನಾಯ್ಡು ರಾಜ್ಯಪಾಲರಾಗಿದ್ದರು. ಆಗ ಉತ್ತರ ಪ್ರದೇಶವನ್ನು ಸಂಯುಕ್ತ ಪ್ರದೇಶಗಳು ಎಂದು ಕರೆಯಲಾಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ