ತಿರುಪತಿಯಲ್ಲಿ ವ್ಯಕ್ತಿ ಆತ್ಮಹತ್ಯೆ: ಇತಿಹಾಸದಲ್ಲೇ ಇದೇ ಮೊದಲು

Team Udayavani, Dec 14, 2019, 10:13 PM IST

ಸಾಂದರ್ಭಿಕ ಚಿತ್ರ.

ತಿರುಮಲ: ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ಇಂತಹ ಘಟನೆ ಸಂಭವಿಸಿದೆ.

ದೇಗುಲ ಬಳಿ ಶುಕ್ರವಾರ ನಸುಕಿನಲ್ಲಿ ತಮಿಳುನಾಡು ಮೂಲದ 40 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊದಲು ಇದನ್ನು ಸಹಜ ಸಾವು ಎನ್ನಲಾಗಿತ್ತು. ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಎಂಬುದು ದೃಢಪಟ್ಟಿದೆ. ಘಟನೆ ಬಳಿಕ ಈ ಸ್ಥಳದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಲಾಯಿತು. ಇದಕ್ಕಾಗಿ ದೇಗುಲಕ್ಕೆ ಹೋಗುವ ರಸ್ತೆಯನ್ನು ಬಂದ್‌ ಮಾಡಲಾಗಿತ್ತು. ದೇಗುಲದ ಇತಿಹಾಸದಲ್ಲೇ ಪ್ರಪ್ರಥಮ ಬಾರಿ ಇಂತಹ ಘಟನೆ ನಡೆದಿದ್ದು, ವಿಮೋಚನೆ ಸಿಗುತ್ತದೆ ಎಂಬ ಮೌಡ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪವಿತ್ರ ಕ್ಷೇತ್ರದಲ್ಲಿ ಬಲವಂತವಾಗಿ ಜೀವ ತ್ಯಜಿಸುವುದು ಅಪಶಕುನವಾಗುತ್ತದೆ. ಕ್ಷೇತ್ರದಲ್ಲಿ ಭಕ್ತರು ಇಂತಹ ಕೆಟ್ಟ ನಿರ್ಧಾರ ಕೈಗೊಳ್ಳಬೇಡಿ ಎಂದು ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ