ವಾಯುಭಾರ ಕುಸಿತ; ಆಂಧ್ರದಲ್ಲಿ ಮನೆಗಳು, ಹೆದ್ದಾರಿ ಜಲಾವೃತ
Team Udayavani, Sep 14, 2022, 6:50 AM IST
ಹೊಸದಿಲ್ಲಿ: ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವೆಂಬಂತೆ ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯು ಹಲವು ಮನೆ ಗಳು, ಹೆದ್ದಾರಿಗಳನ್ನು ಮುಳುಗಿಸಿದೆ.
ಶ್ರೀಕಾಕುಳಂನಲ್ಲಿ ವಸತಿ ಕಾಲೊನಿ ಗಳು, ಹೆದ್ದಾರಿಗಳು, ಕಾರುಗಳು ಮುಳುಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನೀರಲ್ಲಿ ಮುಳುಗಿರುವ ಕಾರೊಂದನ್ನು ಜನರೆಲ್ಲ ಸೇರಿ ಹೊರಗೆಳೆಯುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಒಡಿಶಾದಲ್ಲೂ ಇದೇ ಪರಿಸ್ಥಿತಿ ಮುಂದುವರಿದಿದ್ದು, ಬುಧವಾರವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಬಯಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ರಾಯಗಢ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್