ಚೆನ್ನೈ: ಮತ್ತೊಂದು ಐಶಾರಾಮಿ ಹೋಟೆಲ್ ನ 20 ಮಂದಿ ಸಿಬ್ಬಂದಿಗೆ ಕೋವಿಡ್ ದೃಢ
Team Udayavani, Jan 4, 2021, 8:35 PM IST
ಚೆನ್ನೈ: ಇಲ್ಲಿನ ಐಶಾರಾಮಿ ಹೋಟೇಲ್ ಒಂದರ 65 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮತ್ತೊಂದು ಐಶಾರಾಮಿ ಹೊಟೇಲ್ ಲೀಲಾ ಪ್ಯಾಲೇಸ್ ನ 20 ಮಂದಿ ಸಿಬ್ಬಂದಿಗೆ ಸೋಂಕು ತಗುಲಿದೆ.
ಡಿಸೆಂಬರ್ 31 ಮತ್ತು ಜನವರಿ 2ರ ನಡುವೆ 20 ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಗುಲಿದ್ದು, ಆರೋಗ್ಯ ಅಧಿಕಾರಿಗಳು ಹೋಟೇಲ್ ಗಳಲ್ಲಿ ಕಠಿಣ ಮಾರ್ಗಸೂಚಿ ಜಾರಿಗೊಳಿಸಿದ್ದಾರೆ.
ಚೆನ್ನೈನ ಹೋಟೇಲ್ ಒಂದರ 65 ಸಿಬ್ಬಂದಿಗೆ ಸೋಂಕು ದೃಢಪಟ್ಟ ನಂತರ ಆರೋಗ್ಯ ಅಧಿಕಾರಿಗಳು ಐಶಾರಾಮಿ ಹೊಟೇಲ್ ಗಳಲ್ಲಿ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದರು. ಈವರೆಗೂ 609 ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದು 85 ಜನರಿಗೆ ಸೋಂಕು ದೃಢಪಟ್ಟಿದೆ. ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಕೂಡ ಹೋಟೇಲ್ ಗೆ ಭೇಟಿ ನೀಡಿದವರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಬೇಕೆಂದು ಸೂಚನೆ ನೀಡಿದೆ.
ಇದನ್ನೂ ಓದಿ: ಭಾರತದಲ್ಲಿ ರೂಪಾಂತರಿ ಕೋವಿಡ್ ಭೀತಿ: ಒಟ್ಟು 38 ಜನರಲ್ಲಿ ಸೋಂಕು ಪತ್ತೆ
ಏತನ್ಮಧ್ಯೆ ದೇಶದಲ್ಲಿ ಬ್ರಿಟನ್ ರೂಪಾಂತರಿತ ಕೋವಿಡ್ ಭೀತಿ ಹೆಚ್ಚಿಸಿದ್ದು, ಒಟ್ಟಾರೆ 38 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ವರದಿಗಳ ಪ್ರಕಾರ ಬೆಂಗಳೂರಿನಲ್ಲಿ 10 ಪ್ರಕರಣ, ಹೈದರಾಬಾದ್ ನಲ್ಲಿ 3, ಪುಣೆಯಲ್ಲಿ 5, ದೆಹಲಿಯಲ್ಲಿ 19, ಕೊಲ್ಕತ್ತಾದಲ್ಲಿ 1 ಬ್ರಿಟನ್ ರೂಪಾಂತರಿತ ಕೋವಿಡ್ ಸೋಂಕಿತರು ಕಂಡುಬಂದಿದ್ದಾರೆ.
ಇದೀಗ ಸೋಂಕಿತರೆಲ್ಲರನ್ನೂ ಸಿಂಗಲ್ ರೂಂ ಐಶೋಲೇಶನ್ ಗೆ ಒಳಪಡಿಸಲಾಗಿದ್ದು, ಸೋಂಕಿತರ ಸಂಪರ್ಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಮಾತ್ರವಲ್ಲದೆ ವೈರಸ್ ಹರಡುವುದನ್ನು ತಡೆಗಟ್ಟಲು ಆಯಾ ರಾಜ್ಯ ಸರ್ಕಾರಗಳಿಂದ ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯಗಳು ಕೂಡ ನಡೆಯುತ್ತಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಪಟ್ಟುಬಿಡದ ರೈತರು: 7ನೇ ಸುತ್ತಿನ ಮಾತುಕತೆ ವಿಫಲ; ಮುಂದಿನ ಸಭೆ ಜ.8ಕ್ಕೆ ನಿಗದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ