NCP Crisis; ಅಜಿತ್ ಕ್ಯಾಂಪ್ ಬಿಟ್ಟು ಶರದ್ ಪವಾರ್ ಗೆ ಬೆಂಬಲ ನೀಡಿದ ಮೂವರು ಶಾಸಕರು

Team Udayavani, Jul 10, 2023, 12:28 PM IST

NCP Crisis; ಅಜಿತ್ ಕ್ಯಾಂಪ್ ಬಿಟ್ಟು ಶರದ್ ಪವಾರ್ ಗೆ ಬೆಂಬಲ ನೀಡಿದ ಮೂವರು ಶಾಸಕರು

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಹಸನಗಳು ಬೇಗ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಅಜಿತ್ ಪವಾರ್ ಅವರು ತನ್ನ ಹಲವು ಶಾಸಕರೊಂದಿಗೆ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ ಬಳಿಕ ಆರಂಭವಾದ ರಾಜಕೀಯ ಬೆಳವಣಿಗೆಗಳು ಇನ್ನೂ ಮುಂದುವರಿದಿವೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಯ ಎರಡು ಬಣಗಳಾದ ಶರದ್ ಪವಾರ್ ಬಣ ಮತ್ತು ಅಜಿತ್ ಪವಾರ್ ಬಣದ ನಡುವಿನ ಹಗ್ಗಜಗ್ಗಾಟ ಇನ್ನೂ ನಡೆಯತ್ತಲೇ ಇದೆ.

ಎನ್ ಸಿಪಿ ಪಕ್ಷವು ತನಗೆ ಸೇರಬೇಕು ಎಂದು ಅಜಿತ್ ಪವಾರ್ ಹೇಳಿಕೊಳ್ಳುತ್ತಿರುವಂತೆ ಅವರ ಬಣಕ್ಕೆ ಹಿನ್ನಡೆಯಾಗುವ ಲಕ್ಷಣ ಕಾಣುತ್ತಿದೆ. ಯಾಕೆಂದರೆ ಅಜಿತ್ ಬಣದಲ್ಲಿ ಗುರುತಿಸಿಕೊಂಡಿದ್ದ ಮತ್ತೊಬ್ಬ ಶಾಸಕರು ಶರದ್ ಪವಾರ್ ಬಣಕ್ಕೆ ಬೆಂಬಲ ನೀಡಿದ್ದಾರೆ.

ಈ ಮೊದಲು ಇಬ್ಬರು ಶಾಸಕರು ಅಜಿತ್ ಬಣದಿಂದ ಶರದ್ ಬಣಕ್ಕೆ ಜಂಪ್ ಮಾಡಿದ್ದರು. ಇದೀಗ ಮೂರನೆಯವರಾಗಿ ಮಕ್ರಂದ್ ಜಾಧವ್ ಪಾಟೀಲ್ ಕೂಡಾ ಶರದ್ ಪವಾರ್ ಗೆ ಬೆಂಬಲ ಸೂಚಿಸಿದ್ದಾರೆ. ಈ ಹಿಂದೆ ರಾಮರಾಜ್ ಜಿ ನಾಯ್ಕ್ ಮತ್ತು ದೀಪಕ್ ಚೌಹಾಣ್ ಅವರು ಶರದ್ ಕ್ಯಾಂಪ್ ಗೆ ಮರಳಿದ್ದರು.

ಇದನ್ನೂ ಓದಿ:“RRR-2” ಸಿನಿಮಾಕ್ಕೆ ರಾಜಮೌಳಿ ನಿರ್ದೇಶನ ಇರಲ್ಲ.. ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

ಮಕರಂದ್ ಜಾಧವ್ ಪಾಟೀಲ್ ಅವರು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ವಾಯ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ಮಕರಂದ್ ಅವರ ನೂರಾರು ಬೆಂಬಲಿಗರು ಕೂಡ ಅವರ ಹಾದಿಯಲ್ಲೇ ಶರದ್ ಪಾಳಯಕ್ಕೆ ಮರಳಿದ್ದಾರೆ. ಇನ್ನೊಂದೆಡೆ ಶರದ್ ಪವಾರ್ ಬಣದ ಕಿರಣ್ ಲಹಮಟೆ ಅಜಿತ್ ಪಾಳಯಕ್ಕೆ ತೆರಳಿದ್ದಾರೆ. ಲಹಮೇಟ್ ಮೊದಲು ಅಜಿತ್ ಪವಾರ್ ಜೊತೆ ಹೋಗಿ, ನಂತರ ಹಿರಿಯ ಪವಾರ್ ಪಾಳಯಕ್ಕೆ ಹಿಂತಿರುಗಿ ಈಗ ಮತ್ತೆ ಅಜಿತ್ ಪವಾರ್ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಜುಲೈ 2 ರಂದು ಅಜಿತ್ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಅವರು ಸಹ ಅಲ್ಲಿ ಹಾಜರಿದ್ದರು.

ಅಜಿತ್ ಪವಾರ್ ಅವರು ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರಿದ ನಂತರ, ಎನ್‌ಸಿಪಿ ಎರಡು ಬಣಗಳಾಗಿ ಒಡೆದಿದೆ. ಮಾವ ಶರದ್ ಪವಾರ್ ಮತ್ತು ಅವರ ಸೋದರಳಿಯ ಅಜಿತ್ ಪವಾರ್ ನಡುವೆ ಪಕ್ಷದ ನಿಯಂತ್ರಣಕ್ಕಾಗಿ ಹೋರಾಟ ಪ್ರಾರಂಭವಾಗಿದೆ. ಜುಲೈ 5 ರಂದು ಎರಡೂ ಬಣಗಳು ತಮ್ಮ ಶಕ್ತಿ ಪ್ರದರ್ಶನಕ್ಕೆ ಸಭೆ ನಡೆಸಿದ್ದವು. ಅಜಿತ್ ಬಣದ ಸಭೆಯಲ್ಲಿ 35ಕ್ಕೂ ಹೆಚ್ಚು ಶಾಸಕರ ಉಪಸ್ಥಿತಿ ಹೇಳಿಕೊಂಡಿದ್ದು, 15 ಶಾಸಕರು ಶರದ್ ಬಣ ತಲುಪಿದ್ದಾರೆ. ಆದರೆ, ಅಜಿತ್ ತಮ್ಮ ಬಳಿ 40ಕ್ಕೂ ಹೆಚ್ಚು ಶಾಸಕರಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ ಸಂಪುಟದಲ್ಲಿ ಎನ್‌ಸಿಪಿ 53 ಶಾಸಕರನ್ನು ಹೊಂದಿದ್ದು, ಪಕ್ಷವನ್ನು ನಿಯಂತ್ರಿಸಲು ಅಜಿತ್ ಪವಾರ್‌ಗೆ 36 ಶಾಸಕರ ಬೆಂಬಲ ಬೇಕಾಗುತ್ತದೆ.

ಟಾಪ್ ನ್ಯೂಸ್

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.