ಆಪ್ ಮುಖಂಡ ತಾಹೀರ್ ಹುಸೇನ್ ಅಮಾನತು: ಆರೋಪ ಸಾಬೀತಾದರೆ ದುಪ್ಪಟ್ಟು ಶಿಕ್ಷೆ: ಕೇಜ್ರಿವಾಲ್

Team Udayavani, Feb 28, 2020, 8:00 AM IST

ನವದೆಹಲಿ: ಆಪ್ ಮುಖಂಡ, ಪಾಲಿಕೆ ಸದಸ್ಯ ತಾಹೀರ್ ಹುಸೇನ್ ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾತನತುಗೊಳಿಸಲಾಗಿದೆ. ಹುಸೇನ್ ಅವರು ತಮ್ಮ  ವಿರುದ್ಧದ ಆರೋಪಗಳಿಂದ  ಮುಕ್ತರಾಗುವವರೆಗೂ ಅವರನ್ನು ಅಮಾನತು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ ಎಂದು ವರದಿಯಾಗಿದೆ.

ದೆಹಲಿ ಹಿಂಸಾಚಾರಕ್ಕೆ ಬಲಿಯಾದ ಗುಪ್ತಚರ ದಳದ ಅಧಿಕಾರಿ ಅಂಕಿತ್ ಶರ್ಮಾ ಮೇಲೆ ಹಲ್ಲೆ ನಡೆಸಿದ್ದು ಆಮ್ ಆದ್ಮಿ ಪಕ್ಷದ ನಾಯಕರು ಎಂದು ಅವರ ತಂದೆ ರೋಹಿತ್ ಶರ್ಮಾ ಆರೋಪಿಸಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ ಆಪ್ ಕೌನ್ಸಿಲರ್ ತಾಹೀರ್ ಹುಸೇನ್ ಮನೆ ಮೇಲಿನ ಟೆರೇಸ್ ನಲ್ಲಿ ಪೆಟ್ರೋಲ್ ಬಾಂಬ್ ಹಾಗೂ ಕಲ್ಲುಗಳು ಪತ್ತೆಯಾಗಿದ್ದವು. ಆದ್ದರಿಂದ ಹುಸೇನ್ ಮೇಲೆ  ದಯಾಳ್ ಪುರ ಪೊಲೀಸ್ ಠಾಣೆಯಲ್ಲಿ 302 ಸೆಕ್ಷನ್ ನಡಿ ಎಫ್ ಐ ಆರ್ ದಾಖಾಲಾಗಿತ್ತು. ಮಾತ್ರವಲ್ಲದೆ ಖಜೂರಿ ಖಾಸ್ ಪ್ರದೇಶದಲ್ಲಿರುವ ಅವರ ಕಾರ್ಖಾನೆಗೆ ಬೀಗ ಜಡಿಯಲಾಗಿತ್ತು.

“ಅಂಕಿತ್ ಶರ್ಮಾ ಅವರ ತಂದೆಯ ದೂರಿನ ಮೇರೆಗೆ ನಾವು ಕೊಲೆ ಮತ್ತು ಅಪಹರಣ ಪ್ರಕರಣವನ್ನು ದಾಖಲಿಸಿದ್ದೇವೆ. ಎಫ್‌ ಐ ಆರ್‌ನಲ್ಲಿ ಹುಸೇನ್ ಅವರನ್ನು ಶರ್ಮಾ ಅವರ ತಂದೆ ಹೆಸರಿಸಿದ್ದಾರೆ. ಈ ಪ್ರಕರಣವನ್ನು ದಯಾಳ್ ಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ”ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ತಾಹೀರ್ ಹುಸೇನ್, ಗಲಭೆಯಲ್ಲಿ ತಮಗೂ ತೊಂದರೆಯಾಗಿದೆ. ನಮ್ಮ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಲವಂತವಾಗಿ ನನ್ನನ್ನು ಹೊರ ಹಾಕಿದ್ದರು ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ತಾಹಿರ್ ಹುಸೇನ್ ತಪ್ಪಿತಸ್ಥರೆಂದು ಸಾಬೀತಾದರೆ, ಅವರಿಗೆ ಎರಡು ಪಟ್ಟು ಶಿಕ್ಷೆ ನೀಡಬೇಕು. ಮಾತ್ರವಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಕೀಯ ಇರಬಾರದು  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು...

  • ಕುಂದಾಪುರ: ಉಡುಪಿ ಜಿಲ್ಲೆಯ ಶಿರೂರು, ಹೊಸಂಗಡಿ, ಕುಂದಾಪುರ ನಗರ ಭಾಗದಲ್ಲಿ ಮಾತ್ರವಲ್ಲದೆ ಅಂಪಾರು ಮತ್ತಿತರ ಕೆಲವೆಡೆಗಳಲ್ಲಿಯೂ ಶನಿವಾರದಿಂದ ಚೆಕ್‌ಪೋಸ್ಟ್‌ಗಳನ್ನು...

  • ಬೆಂಗಳೂರು: ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಎ. 15ರ ತನಕ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ಪಾವತಿ ಮಾಡಿಸಿಕೊಳ್ಳದಂತೆ...

  • ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿದ್ದು, ಶನಿವಾರ 18 ಮಂದಿಗೆ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 82ಕ್ಕೆ ಏರಿದೆ. ಶನಿವಾರ...

  • ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್‌ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ಗೆ ನಿರ್ಧರಿಸಿದ್ದು,...