ನೂತನ ಕಾಂಗ್ರೆಸ್‌ ಅಧ್ಯಕ್ಷರಾಗಿ ಒಬಿಸಿ, ಎಸ್‌ಸಿ/ಎಸ್‌ಟಿ ನಾಯಕರನ್ನು ನೇಮಿಸಿ: ರಾಹುಲ್‌

Team Udayavani, May 30, 2019, 11:07 AM IST

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಒಬಿಸಿ ಅಥವಾ ಎಸ್‌ಸಿ/ಎಸ್‌ಟಿ ನಾಯಕರನ್ನು ನೇಮಿಸುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪಕ್ಷದ ಹಿರಿಯ ನಾಯಕರನ್ನು ಕೇಳಿಕೊಂಡಿದ್ದಾರೆ.

ಈ ನಡುವೆ ಪಕ್ಷದ ಹಿರಿಯ ನಾಯಕರು ರಾಹುಲ್‌ ಗಾಂಧಿಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಬಿಡದಂತೆ ಒತ್ತಾಯಿಸುವುದನ್ನು ಮುಂದುವರಿಸಿದ್ದಾರೆ; ಆದರೂ ರಾಹುಲ್‌ ಯಾವುದೇ ಒತ್ತಡಕ್ಕೆ ತಾನು ಮಣಿಯುವುದಿಲ್ಲ; ಅಧ್ಯಕ್ಷ ಪದಕ್ಕೆ ತನ್ನ ರಾಜೀನಾಮೆ ನಿಲುವು ಅಚಲ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಷ್ಟೇ ಮುಗಿದಿರುವ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 52 ಸ್ಥಾನಗಳನ್ನು ಗೆದ್ದು ಅತ್ಯಂತ ದಯನೀಯ ನಿರ್ವಹಣೆಯನ್ನು ತೋರಿದ್ದು ಇದರ ಪೂರ್ತಿ ಹೊಣೆಯನ್ನು ತಾನೇ ವಹಿಸಿಕೊಂಡು ಪಕ್ಷದ ಅಧ್ಯಕ್ಷ ಪದಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಹುಲ್‌ ಹೇಳಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಮಾವಶೇಷವಾಗಿದೆ.

ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳ ನಾಯಕರಾದ ಲಾಲು ಪ್ರಸಾದ್‌ ಯಾದವ್‌, ಎಂ ಕೆ ಸ್ಟಾಲಿನ್‌, ಎಚ್‌ ಡಿ ಕುಮಾರಸ್ವಾಮಿ, ಶೀಲಾ ದೀಕ್ಷಿತ್‌ ಮುಂತಾಗಿ ಅನೇಕರು ರಾಹುಲ್‌ ಗಾಂಧಿಗೆ ಪಕ್ಷಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯವಂತೆ ಕೋರಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ