Udayavni Special

ಬೆಂಗಳೂರು ಸೇರಿ ಎಲ್ಲೆಡೆ ಕಟ್ಟೆಚ್ಚರ


Team Udayavani, Feb 28, 2019, 12:30 AM IST

x-7.jpg

ಪಾಕಿಸ್ತಾನದಲ್ಲಿರುವ ಉಗ್ರ ನೆಲೆಗಳ ಮೇಲೆ ದಾಳಿ ನಡೆದ ಕಾರಣ ನೆರೆಯ ರಾಷ್ಟ್ರ ಮರು ದಾಳಿ ನಡೆಸುವ ನಿರೀಕ್ಷೆ ಹೆಚ್ಚಿರುವುದರಿಂದ ದೆಹಲಿ, ಬೆಂಗಳೂರು, ಮುಂಬೈ ಸೇರಿದಂತೆ ಇತರ ಐದು ಮಹಾನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಇಂಥ ದಾಳಿಗಳು ಪಾಕಿಸ್ತಾನ ಸೇನೆಯಿಂದ ಮಾತ್ರವಲ್ಲ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ವ್ಯಸ್ತವಾಗಿರಬಹುದಾದ ಪಾಕಿಸ್ತಾನ ಬೆಂಬಲಿತ ಯಾವುದೇ ಉಗ್ರ ಸಂಘಟನೆಯ ಸದಸ್ಯರಿಂದಲೂ ಆಗಬಹುದಾದ್ದರಿಂದ ಎಲ್ಲೆಡೆಯೂ ಕಟ್ಟೆಚ್ಚರ ಕೈಗೊಳ್ಳುವಂತೆ ಸೂಚಿಸಲಾಗಿದೆ.  

ಈ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌,  ಹಿರಿಯ ಅಧಿಕಾರಿಗಳೊಡನೆ ಕೈಗೊಳ್ಳಬಹುದಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.  ದೇಶದ ಉತ್ತರ ಮತ್ತು ಪಶ್ಚಿಮ ಭಾಗದಲ್ಲಿರುವ ಪರಮಾಣು ಕೇಂದ್ರಗಳು, ವಿಮಾನ ನಿಲ್ದಾಣಗಳು, ವಾಯು, ನೌಕೆ ಮತ್ತು ಸೇನಾ ನೆಲೆಗಳು, ವಿವಿಧ ಪಟ್ಟಗಳಲ್ಲಿರುವ ದಂಡು ಪ್ರದೇಶಗಳಲ್ಲಿ ಬಿಗಿಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ. ಪಂಬಾಜ್‌ನ ಐದು ಜಿಲ್ಲೆಗಳಾದ ಗುರುದಾಸ್ಪುರ, ತಾರ್ನ್ ತರಣ್‌, ಅಮೃತಸರ, ಫಿರೋಝೆಪುರ್‌ ಹಾಗೂ ಫಾಝಿಲ್ಕಾ ಜಿಲ್ಲೆಗಳ 553 ಕಿ.ಮೀ. ದೂರದ ಪಾರ್ಶ್ವವು ಪಾಕಿಸ್ತಾನ ಗಡಿಯೊಂದಿಗೆ ಹೊಂದಿಕೊಂಡಿರುವುದರಿಂದ ಆ ಜಿಲ್ಲೆಗಳ ಭದ್ರತೆಗೆ ವಿಶೇಷ ಗಮನ ನೀಡುವಂತೆ ಸೂಚಿಸಲಾಗಿದೆ. 

ರಾಜಸ್ಥಾನ ಸಹ 1,048 ಕಿ.ಮೀ. ದೂರದ ಭೂಭಾಗವನ್ನು ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯೊಂದಿಗೆ ಹಂಚಿಕೊಂಡಿ ರುವುದರಿಂದ ಆ ಭಾಗದಲ್ಲಿ ಸಂಜೆ 6ರಿಂದ 7ರವರೆಗೆ ಸಾರ್ವಜನಿಕರ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಏಪ್ರಿಲ್‌ ಮೊದಲ ವಾರದವರೆಗೆ ಈ ನಿಷೇಧ ಮುಂದುವರಿಯಲಿದೆ. 

ಶಟ್‌ಡೌನ್‌ ಆದೇಶ ಹಿಂಪಡೆತ    
ಪಾಕಿಸ್ತಾನದ ಗಡಿಗೆ ಸಮೀಪವಿರುವ ರಾಜ್ಯಗಳಾದ ಜಮ್ಮು ಕಾಶ್ಮೀರ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಲ್ಲಿರುವ ಒಂಭತ್ತು ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಕೇಂದ್ರ ಸರ್ಕಾರ, ಬುಧವಾರ ಬೆಳಗ್ಗೆ ಆದೇಶ ಹೊರಡಿಸಿತ್ತು. ಇದರಿಂದಾಗಿ, ಅಮೃತಸರ, ಜಮ್ಮು, ಶ್ರೀನಗರ ಹಾಗೂ ಲೇಹ್‌ ಮುಂತಾದೆಡೆ ಪ್ರಯಾಣಿಕರು ಪರದಾಡಿದರು. ಆದರೆ, ಮಧ್ಯಾಹ್ನದ ಹೊತ್ತಿಗೆ ಆದೇಶವನ್ನು ಹಿಂಪಡೆಯಲಾಯಿತು. ಇದರಿಂದಾಗಿ, ಆ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟ ಎಂದಿನಂತೆ ಆರಂಭವಾಯಿತು. 

ಟಾಪ್ ನ್ಯೂಸ್

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ರಣವೀರ್‌ ಸಿಂಗ್‌ನಂತೆ ಕಲರ್‌ಫುಲ್ ಆದ ಕಪಿಲ್‌ ದೇವ್‌!

ರಣವೀರ್‌ ಸಿಂಗ್‌ನಂತೆ ಕಲರ್‌ಫುಲ್ ಆದ ಕಪಿಲ್‌ ದೇವ್‌!

ಚಿನ್ನದ ನಾಣ್ಯ: ಮಾಲೀಕನಿಗೆ ಒಪ್ಪಿಸಿದ ಕೂಲಿಯಾಳು!

ಚಿನ್ನದ ನಾಣ್ಯ: ಮಾಲೀಕನಿಗೆ ಒಪ್ಪಿಸಿದ ಕೂಲಿಯಾಳು!

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.