ಭೀಕರ ಅಪಘಾತ: ಕಾರಿನ ಮೇಲೆ ಮಗುಚಿ ಬಿದ್ದ ಮರಳು ತುಂಬಿದ ಲಾರಿ: 8 ಮಂದಿ ಸಾವು
Team Udayavani, Dec 2, 2020, 9:46 AM IST
ಉತ್ತರಪ್ರದೇಶ: ಮರಳು ತುಂಬಿದ ಲಾರಿ, ಸ್ಕಾರ್ಪಿಯೋ ಕಾರೊಂದರ ಮೇಲೆ ಮಗುಚಿಬಿದ್ದ ಪರಿಣಾಮ 8 ಮಂದಿ ದಾರುಣವಾಗಿ ಸಾವನಪ್ಪಿದ ಘಟನೆ ಉತ್ತರಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ನಡೆದಿದೆ.
ಸ್ಕಾರ್ಪಿಯೋ ವಾಹನದಲ್ಲಿ 10 ಮಂದಿ ಪ್ರಯಾಣಿಕರು ಮದುವೆ ಕಾರ್ಯಕ್ರಮಕ್ಕೆಂದು ತೆರಳಿ ಹಿಂದಿರುಗುತ್ತಿದ್ದರು ಎನ್ನಲಾಗಿದ್ದು, ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ್ದರು. ಈ ವೇಳೆ ಮರಳು ತುಂಬಿದ್ದ ಟ್ರಕ್ ಕಾರಿನ ಮೇಲೆ ಮಗುಚಿ ಬಿದ್ದಿದೆ.
ಈ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಮಹಿಳೆ ಸ್ಥಳೀಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೌಸಂಭಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಇದನ್ನೂ ಓದಿ: 28 ವರ್ಷಗಳಿಂದ ಮಗನನ್ನು ಕೋಣೆಯಲ್ಲಿ ಕೂಡಿಹಾಕಿದ ಮಹಿಳೆ: ಕಾರಣ ಭಯಾನಕ !
ಪ್ರಾಥಮಿಕ ತನಿಖೆಯ ಪ್ರಕಾರ, ಟ್ರಕ್ ನ ಟಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣಕ್ಕೆ ಸಿಗದೆ ಮಗುಚಿಬಿದ್ದಿದೆ ಎಂದು ವರದಿಯಾಗಿದೆ.
ಘಟನೆಯ ಕುರಿತು ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಸಂತಾಪ ಸೂಚಿಸಿದ್ದು, ಕೂಡಲೇ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್