ಅಸಾರಾಂ ಕೇಸ್; ಬೇಲ್ ಅರ್ಜಿ ವಿಚಾರಣೆ ದಿನಾಂಕ ನೀಡಲು ಸುಪ್ರೀಂ ನಕಾರ
Team Udayavani, Oct 27, 2017, 4:26 PM IST
ನವದೆಹಲಿ: ಸ್ವಯಂಘೋಷಿತ ಗುರು ಅಸಾರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣದ ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಪಡಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜಾಮೀನು ಅರ್ಜಿಯ ವಿಚಾರಣೆಯನ್ನು ಶೀಘ್ರವಾಗಿ ನಡೆಸುವ ಕುರಿತು ಸುಪ್ರೀಂ ಮೆಟ್ಟಿಲೇರಿದ್ದು, ಸುಪ್ರೀಂಕೋರ್ಟ್ ಶೀಘ್ರ ವಿಚಾರಣೆಯ ದಿನಾಂಕ ನೀಡಲು ನಿರಾಕರಿಸಿದೆ.
ಈ ಮೊದಲು ತಮ್ಮ ಕಕ್ಷಿದಾರನ ಜಾಮೀನು ಅರ್ಜಿಯನ್ನು ದೀಪಾವಳಿ ನಂತರ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿತ್ತು, ಆದರೆ ಇದೀಗ ಮುಂದಿನ ವಿಚಾರಣಾ ದಿನಾಂಕ ಜನವರಿ 4 ಎಂದು ನಮೂದಾಗಿದೆ ಎಂದು ಅಸಾರಂ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದರು.
ಪ್ರಕರಣದ ಬಗ್ಗೆ ಗುಜರಾತ್ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣಾ ಪ್ರಕ್ರಿಯೆ ತುಂಬಾ ತಡವಾಗಿದ್ದು, ಈವರೆಗೂ ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿಲ್ಲ ಎಂದು ಸುಪ್ರಿಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು. ಅಸಾರಾಂ ಬಾಪು ತನಿಖೆಯ ವಿಚಾರದಲ್ಲಿ ವಿಳಂಬಗತಿಯಲ್ಲಿ ಸಾಗುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ