ಲೋಕಸಮರ; ಭೋಪಾಲ್ ನಿಂದ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್

Team Udayavani, Apr 22, 2019, 3:59 PM IST

ಭೋಪಾಲ್: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೋಮವಾರ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕಿಳಿಯಲು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರೋಹಿತರು ಜಿಲ್ಲಾಧಿಕಾರಿ ಕಚೇರಿಯೊಳಗೆ ಮಂತ್ರಪಠಿಸುತ್ತಿದ್ದರು.

ನಾನು ಮತ್ತೊಂದು ನಾಮಪತ್ರದ ಪ್ರತಿಯನ್ನು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಿದ್ದೇನೆ. ಇಂದು ನಾನು ಶುಭಗಳಿಗೆಯ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ್ದೆ ಅಷ್ಟೇ ಎಂದು ಸುದ್ದಿಗಾರರ ಜೊತೆ ಮಾತನಾಡುತ್ತ ಪ್ರಗ್ಯಾ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಮೇ 12ರಂದು ಭೋಪಾಲ್ ನಲ್ಲಿ ನಡೆಯಲಿರುವ 6ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧೆಗೆ ಅಣಿಯಾಗಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ