ಕೋವಿಡ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ : 16 ಮಂದಿ ಬೆಂಕಿಗಾಹುತಿ
Team Udayavani, May 1, 2021, 7:26 AM IST
ಭರೂಚ್ : ಕೋವಿಡ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ 16 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ 12.30ರ ವೇಳೆ ಗುಜರಾಜ್ ನ ಭರೂಚ್ ಪ್ರದೇಶದಲ್ಲಿ ನಡೆದಿದೆ. ಘಟನೆಯು ಪಟೇಲ್ ವೆಲ್ಫೇರ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಸಿಂಹ ಚುಡಸಮ, ಐಸಿಯುವಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಸದ್ಯ ಬೆಂಕಿಯನ್ನು ನಂದಿಸಲಾಗಿದೆ ಎಂದಿದ್ದಾರೆ. ರಾತ್ರಿ ವೇಳೆ 12 ಮಂದಿ ಸಾವನ್ನಪ್ಪಿರುವ ವಿಚಾರ ತಿಳಿದಿದ್ದು, ಸದ್ಯದ ಮಾಹಿತಿ ಪ್ರಕಾರ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನೆ ನಡೆಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್ಗೆ ಜೈಶಂಕರ್ ಚಾಟಿ
MUST WATCH
ಹೊಸ ಸೇರ್ಪಡೆ
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್