ಮುಂಬೈ; ಕೆಮಿಕಲ್ ತಯಾರಿಕೆ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, 10 ಮಂದಿ ಸಾವು

Team Udayavani, Aug 31, 2019, 12:15 PM IST

ಮುಂಬೈ: ರಾಸಾಯನಿಕ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಧುಲೇ ಸಮೀಪದ ಶಿರ್ಪುರ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಸ್ಫೋಟದ ರಭಸಕ್ಕೆ 70ಕ್ಕೂ ಅಧಿಕ ಮಂದಿ ಕಾರ್ಖಾನೆ ಒಳಗಡೆ ಸಿಲುಕಿದ್ದು, ಸ್ಥಳಕ್ಕೆ ಎನ್ ಡಿಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.

ಇಂದು ಬೆಳಗ್ಗೆ 9.45ರ ಸುಮಾರಿಗೆ ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ಸಂಭವಿಸಿರುವುದಾಗಿ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಸ್ಫೋಟದ ತೀವ್ರತೆ ಸುತ್ತಮುತ್ತ ಗ್ರಾಮದ ಜನರಲ್ಲಿ ಭೂಕಂಪನದ ಅನುಭವ ಮೂಡಿಸಿತ್ತು ಎಂದು ವರದಿ ವಿವರಿಸಿದೆ.

ಸ್ಫೋಟದಿಂದಾಗಿ ಇಡೀ ಪ್ರದೇಶ ಕಪ್ಪು ಹೊಗೆಯಿಂದ ಆವರಿಸಿಕೊಂಡಿದೆ. ಈವರೆಗೆ ಎಂಟು ಶವಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ