ಕಣಿವೆಗೆ ಉರುಳಿದ ಬಸ್;16 ಅಮರನಾಥ ಯಾತ್ರಿಕರ ದುರ್ಮರಣ
Team Udayavani, Jul 16, 2017, 2:43 PM IST
ಜಮ್ಮು: ಅಮರನಾಥ ಯಾತ್ರಿಕರು ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ 16 ಮಂದಿ ಯಾತ್ರಾರ್ಥಿಗಳು ದಾರುಣವಾಗಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡ ಭೀಕರ ದುರ್ಘಟನೆ ಭಾನುವಾರ ನಡೆದಿದೆ.
ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯ ಬನಿಹಾಲ್ ಬಳಿ ಭೀಕರ ಅವಘಡ ನಡೆದಿದೆ. ಟಯರ್ ಸ್ಫೋಟಗೊಂಡು ಬಸ್ ಉರುಳಿದೆ ಎಂದು ಹೇಳಲಾಗಿದೆ. 16 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, 30 ಗಂಭೀರವಾಗಿ ಮಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದ್ದು,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ