ವಾಜಪೇಯಿ ಗಂಭೀರ?
Team Udayavani, Aug 12, 2018, 6:00 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ವಾಜಪೇಯಿ (93) ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ ಎನ್ನಲಾಗಿದೆ. ಜೂ.11ರಂದು ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಮೂತ್ರನಾಳದ ಸೋಂಕು ಸಮಸ್ಯೆಗಾಗಿ ಚಿಕಿತ್ಸೆ ನೀಡಲಾಗಿತ್ತು. ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ಮೋದಿಗೆ ವಾಜಪೇಯಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.