ಅಟಲ್ ಆರೋಗ್ಯ ಮತ್ತಷ್ಟು ಗಂಭೀರ; ಏಮ್ಸ್ಗೆ ವ್ಯಾಪಕ ಭದ್ರತೆ
Team Udayavani, Aug 16, 2018, 9:45 AM IST
ಹೊಸದಿಲ್ಲಿ:ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅವರ ಆರೋಗ್ಯ ಸ್ಥಿತಿ ಬುಧವಾರ ಇನ್ನಿಷ್ಟು ಗಂಭೀರವಾಗಿದೆ.
ಏಮ್ಸ್ ಈ ಬಗ್ಗೆ ಮಾಧ್ಯಮ ಪ್ರಕಟನೆ ನೀಡಿದ್ದು ಕಳೆದ 9 ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ದುರದೃಷ್ಟವಶಾತ್, ವಾಜಪೇಯಿ ಅವರ ಆರೋಗ್ಯ ಸ್ಥಿತಿಯು ಇನ್ನಷ್ಟು ಹದಗೆಟ್ಟಿದೆ. ಆಮ್ಲಜನಕದ ಬೆಂಬಲದಲ್ಲಿ ಅವರು ಉಸಿರಾಡುತ್ತಿದ್ದಾರೆ ಎಂದು ತಿಳಿಸಿದೆ.
ಬುಧವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆ ಬಳಿಕ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸೇರಿದಂತೆ ಕೇಂದ್ರ ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಏಮ್ಸ್ ಆಸ್ಪತ್ರೆಯಲ್ಲಿ ವ್ಯಾಪಕ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ